ಇತ್ತೀಚಿನ ಸುದ್ದಿ
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ ಸ್ಥಗಿತ ಸಾಧ್ಯತೆ
28/08/2025, 15:44

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ತಾಲ್ಲೂಕಿನ ಮೇಕೇರಿ ಬಳಿ ರಸ್ತೆ ಕುಸಿತ ಕಂಡು ಬಂದಿದೆ. ಮಡಿಕೇರಿಯಿಂದ ವಿರಾಜಪೇಟೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕಳೆದ ಎರಡು ವರ್ಷಗಳ ಹಿಂದೆ ಅಂದಾಜು ನಾಲ್ಕು ಕಿಲೋಮೀಟರ್ ಸಿಮೆಂಟ್ ರಸ್ತೆ ನಿರ್ಮಾಣಗೊಂಡಿತು. ಇದೀಗ ತೀವ್ರ ಮಳೆಯಿಂದಾಗಿ ಸಿಮೆಂಟ್ ರಸ್ತೆಯ ಸಮೀಪ ಮಣ್ಣು ಎಲ್ಲಾ ಕುಸಿತ ಕಂಡಿದ್ದು ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ.
ಸಂಬಂಧಿಸಿದ ಇಲಾಖೆಯವರು ಕೂಡಲೇ ಗಮನಹರಿಸಿ ಮುಂದಾಗುವ ಹೆಚ್ಚಿನ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.