9:14 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ: ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

29/08/2025, 19:42

* ಸಚಿವ ಪ್ರಲ್ಹಾದ ಜೋಶಿ ಒತ್ತಾಸೆಯಂತೆ ಹೊಸ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್‌

* ಸೆಪ್ಟೆಂಬರ್‌ ತಿಂಗಳಿಂದ ಪ್ರತಿವಾರ ವಿಶೇಷ ರೈಲು ಸಂಚಾರ; ಟಿಕೆಟ್‌ ಬುಕಿಂಗ್‌ ಆರಂಭ

* ಮುಂದಿನ ದಿನಗಳಲ್ಲಿ ನಿತ್ಯ ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ

ನವದೆಹಲಿ(reporterkarnataka.com): ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ಕೊಡಮಾಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಒತ್ತಾಸೆಯಂತೆ ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ.
ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ-ಜೋಧಪುರ್‌ ನೂತನ ರೈಲು (ಸಂಖ್ಯೆ: 07359) ಹುಬ್ಬಳ್ಳಿಯಿಂದ 7:30ಕ್ಕೆ ತೆರಳಿ BGKT (ಭಗತ ಕಿ ಕೋಟಿ)ಗೆ ಬೆಳಗ್ಗೆ 5:30ಕ್ಕೆ ತಲುಪಲಿದೆ. ಸದ್ಯ ಪ್ರತಿ ರವಿವಾರ ಈ ರೈಲು ಸಂಚಾರವಿರಲಿದೆ. ಸೆಪ್ಟೆಂಬರ್‌ 28ರಿಂದ ಸಂಚಾರ ಆರಂಭಿಸಲಿದೆ.

*ಟಿಕೆಟ್‌ ಬುಕಿಂಗ್‌ ಶುರು:* ನೂತನವಾಗಿ ಸಂಚಾರ ಆರಂಭವಾಗುವ ಹುಬ್ಬಳ್ಳಿ-ಜೋಧಪುರ್‌ ರೈಲ್ವೆ ಸಂಚಾರಕ್ಕೆ ಪ್ರಯಾಣಿಕರಿಂದ ಆಗಲೇ ಟಿಕೆಟ್‌ ಬುಕಿಂಗ್‌ ಸಹ ಶುರುವಾಗಿದೆ. ರೈಲ್ವೆ ಇಲಾಖೆ ಸೆಪ್ಟೆಂಬರ್‌ 28, ಅಕ್ಟೋಬರ್‌ 5, ಅಕ್ಟೋಬರ್‌ 12, ಅಕ್ಟೋಬರ್‌ 1̧9 ಅಕ್ಟೋಬರ್‌ 2ರಂದು ಪ್ರಯಾಣಕ್ಕೆ ಮುಂಗಡ ಟಿಕೆಟ್‌ ಬುಕಿಂಗ್‌ ಆರಂಭಿಸಿದೆ.

*ಹುಬ್ಬಳ್ಳಿಗರ ಬಹುದಿನದ ಬೇಡಿಕೆ ಈಡೇರಿಕೆ:* ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಉತ್ತರ ಕರ್ನಾಟಕ ಭಾಗದವರಿಂದ ಅನೇಕ ದಿನಗಳಿಂದಲೂ ಬಹು ಬೇಡಿಕೆಯಿತ್ತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸತತ ಪ್ರಯತ್ನದ ಫಲವಾಗಿ ಇದೀಗ ಸಾಕಾರಗೊಂಡಿದೆ.

*ಸಚಿವ ಪ್ರಲ್ಹಾದ ಜೋಶಿ ಸಾಫಲ್ಯ:* ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಸೇರಿದಂತೆ ರಾಜ್ಯಕ್ಕೆ ವಿವಿಧ ರೈಲ್ವೆ ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾಗಿರುವ ಸಚಿವ ಜೋಶಿ ಅವರು, ಇದೀಗ ಹುಬ್ಬಳ್ಳಿ-ಜೋಧಪುರ್‌ ವಿಶೇಷ ರೈಲು ಸಂಚಾರ ಆರಂಭಿಸುವಲ್ಲಿ ಸಹ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಗಮನ ಸೆಳೆದು ರೈಲು ಸಂಚಾರವನ್ನು ಸಾಕಾರಗೊಳಿಸುವಲ್ಲಿ ಸಫಲರಾಗಿದ್ದಾರೆ.
ಬಹುಜನರ ಬೇಡಿಕೆಯಂತೆ ಸಂಸದ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ-ಜೋಧಪುರ್‌ ರೈಲು ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿ, ನಿರಂತರವಾಗಿ ಗಮನ ಸೆಳೆಯುತ್ತಲೇ ಇದ್ದರು. ಜೋಶಿ ಅವರ ಒತ್ತಾಸೆ, ಮನವಿಗೆ ಸ್ಪಂದಿಸಿ ಸಚಿವ ಅಶ್ವಿನಿ ವೈಷ್ಣವ್‌ ಅವರು ಹುಬ್ಬಳ್ಳಿ-ಜೋಧ್‌ಪುರಕ್ಕೆ ನೇರ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾರೆ.

*ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ:* ತಮ್ಮ ಮನವಿ, ಒತ್ತಾಸೆಗೆ ಸ್ಪಂದಿಸಿ ಉತ್ತರ ಕರ್ನಾಟಕ ಭಾಗದ ಅದರಲ್ಲೂ ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ಯೋಜನೆ-ಸೌಲಭ್ಯಗಳಿಗೆ ವಿಶೇಷ ಆಸಕ್ತಿ ತೋರಿ ಅನುಮೋದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು