12:33 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ

01/09/2025, 16:00

ಮೈಸೂರು(reporterkarnataka.com):ಬಿಜೆಪಿಯವರು ಧರ್ಮಸ್ಥಳಕ್ಕೆ ರಾಜಕೀಯ ಯಾತ್ರೆ ಕೈಗೊಂಡಿದ್ದಾರೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದರು.
ಮೈಸೂರಿಗೂ ಚಾಮುಂಡಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರು ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ಲವೇ? ಎಂದು ಪ್ರಶ್ನಿಸಿದರು. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು.
ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದ ಮುಖ್ಯಮಂತ್ರಿಗಳು, ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಅವಕಾಶ ನೀಡಲಾಗಿದೆ ಎಂದವರು.
ಯಾವುದೇ ದಸರಾ ಹಬ್ಬದ ಮೇಲೆ ಈ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ ಎಂದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ? ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ ಎಂದರು.
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ವಿಷಯ ಇರುವುದು ಚಾಮುಂಡಿ ಬೆಟ್ಟದ್ದಲ್ಲ, ದಸರಾ ಹಬ್ಬದ್ದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು