7:30 AM Sunday7 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಜಿಎಸ್‌ಟಿ ಸರಳೀಕರಣ | ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ ಕಾಮತ್

04/09/2025, 20:12

ಮಂಗಳೂರು(reporterkarnataka.com): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ ಬದುಕಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ತೆರಿಗೆ ಗಣನೀಯವಾಗಿ ಇಳಿಕೆಯಾಗಲಿದೆ. ಆ ಮೂಲಕ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು, ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದರು.
ಒಂದೆಡೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆ ಹೆಚ್ಚಿಸಿ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೆರಿಗೆ ಭಾರ ಹೆಚ್ಚಿಸುವುದಲ್ಲ, ಇಳಿಸುವುದಕ್ಕೆ ನಮ್ಮ ಆದ್ಯತೆ ಎಂದು ಶೇ.12 ಮತ್ತು ಶೇ.28ರ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಶೇ.5 ಮತ್ತು ಶೇ.18 ಸ್ಲ್ಯಾಬ್‌ಗೆ ಮಾತ್ರ ಅನುಮೋದನೆ ನೀಡಿದ್ದು ದೇಶದ ಪಾಲಿಗೆ ದಸರಾ ಹಾಗೂ ದೀಪಾವಳಿ ಉಡುಗೊರೆಯಾಗಿದೆ. ಆ ಕಾರಣಕ್ಕಾಗಿ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ನಾಡಿನ ಜನತೆಯ ಪರವಾಗಿ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು