7:01 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Chikkamagaluru | ಉರ್ದು ಶಾಲೆಯ ನೇತೃತ್ವದಲ್ಲಿ ಬಣಕಲ್‌ನಲ್ಲಿ ಕ್ರೀಡಾಕೂಟ

05/09/2025, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterKarnataka@gmail.com

ಬಣಕಲ್ ಹಾಗೂ ಬಾಳೂರು ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವು ಬಣಕಲ್ ಉರ್ದು ಶಾಲೆಯ ನೇತೃತ್ವದಲ್ಲಿ ಬಣಕಲ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಭವ್ಯವಾಗಿ ಆರಂಭವಾಯಿತು.
ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೀನಾಕ್ಷಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಅವರು ಮಾತನಾಡಿ,“ಕ್ರೀಡೆ ಕೇವಲ ಆಟವಲ್ಲ, ಅದು ಜೀವನದ ಪಾಠ. ಕ್ರೀಡಾಂಗಣದಲ್ಲಿ ಮಕ್ಕಳು ಕಲಿಯುವ ಶಿಸ್ತು, ಪರಿಶ್ರಮ, ಸೋಲಿನಲ್ಲೂ ಗೆಲುವಿನ ಮನೋಭಾವ—ಇವು ಬದುಕಿನ ಪಯಣದಲ್ಲಿ ಮಾರ್ಗದರ್ಶಕವಾಗುತ್ತವೆ. ದೈಹಿಕ-ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಕ್ರೀಡೆ ಸ್ನೇಹ, ಸೌಹಾರ್ದತೆ ಮತ್ತು ತಂಡಭಾವನೆ ಬೆಳೆಸುತ್ತದೆ. 1896ರಲ್ಲಿ ಆರಂಭವಾದ ಆಧುನಿಕ ಒಲಂಪಿಕ್ ಕ್ರೀಡೆ ಜಾಗತಿಕ ಕ್ರೀಡಾ ಚಳವಳಿಗೆ ದಾರಿ ಮಾಡಿಕೊಟ್ಟಿದ್ದು, ನಮ್ಮ ಪಾಠ್ಯಕ್ರಮದಲ್ಲಿಯೂ ಕ್ರೀಡೆಗೆ ಸೂಕ್ತ ಸ್ಥಾನ ನೀಡಬೇಕು,” ಎಂದರು.
ಉರ್ದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಇದ್ರೀಸ್ ಹೇಳಿದರು,
“ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಕ್ರೀಡೆಗೆ ಮಹತ್ವದ ಪಾತ್ರವಿದೆ. ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಕ್ರೀಡೆಯಲ್ಲಿ ತೊಡಗಿಸಬೇಕು,” ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಉರ್ದು ಶಾಲೆಯ ಶಿಕ್ಷಕಿ ರೇಷ್ಮಾ, ಜಿಲ್ಲಾ ಉರ್ದು ಶಾಲೆಗಳ ಅಧ್ಯಕ್ಷ ಅಸ್ಗರ್ ಅಲಿಖಾನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜರೀನಾ, ಸದಸ್ಯರು ಅತೀಕ ಬಾನು, ಇರ್ಫಾನ್, ಸಾಹಿತ್ಯ ಪರಿಷತ್ ಹೋಬಳಿ ಅಧ್ಯಕ್ಷ ಲೋಕೇಶ್, ದಿಲ್ದಾರ್ ಬೇಗಂ, ತಾಲೂಕು ದೈಹಿಕ ಪರಿವೀಕ್ಷಕ ಶ್ರೀನಿವಾಸ್, ತಾಲೂಕು ನೌಕರರ ಸಂಘದ ಉಪಾಧ್ಯಕ್ಷ ಮಂಜಪ್ಪ, ಬಣಕಲ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀನಿವಾಸ್, ದೈಹಿಕ ಶಿಕ್ಷಕರು ಪರಮೇಶ್, ಪ್ರವೀಣ್, ಸುಧಾಕರ್ ಹಾಗೂ ಇತರರು, ನಿವೃತ್ತ ಮುಖ್ಯಶಿಕ್ಷಕ ಪಿ. ವಾಸುದೇವ್, ಶಿಕ್ಷಕ ಅಕ್ರಮ್ ಪಾಶ ಇನ್ನೂ ಮುಂತಾದ ಶಿಕ್ಷಕರು ಹಾಗೂ ಅನೇಕ ಕ್ರೀಡಾಭಿಮಾನಿಗಳು ಭಾಗವಹಿಸಿದರು.
ಉರ್ದು ಶಾಲೆಯ ಎಸ್‌ಡಿಎಂಸಿ ಸದಸ್ಯರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಬಣಕಲ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಹಾಗೂ ಸದಸ್ಯರು ಜ್ಯೋತಿ ಹಚ್ಚಿ ಕ್ರೀಡಾಕೂಟಕ್ಕೆ ಚೈತನ್ಯ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು