ಇತ್ತೀಚಿನ ಸುದ್ದಿ
ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ
05/09/2025, 21:23

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಇಂದು ಸಂಜೆ 4ರ ಸಮಯಕ್ಕೆ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಬೂದಿತಿಟ್ಟು ಬಳಿ ಹೃದಯಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮೂಲತಃ ಬೆಂಗಳೂರಿನವರಾದ, ತಿತಿಮಿತಿಯಲ್ಲಿ ಕುಟುಂಬ ಸಹಿತ ವಾಸಿಸುತ್ತಿದ್ದ ಮನಮೋಹನ್ (46) ನಿಧನ ಹೊಂದಿದ್ದಾರೆ.
ಪೊನ್ನಪ್ಪ ಸಂತೆ, ನಿಟ್ಟೂರು ಬಾಳಲೆ, ಸೋಮವಾರ ಪೇಟೆ ಸಿದ್ದಾಪುರದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದುವರೆ ತಿಂಗಳಿನಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.