4:20 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ವಿವರ

08/09/2025, 00:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಾಡಹಬ್ಬ ಮೈಸೂರು ದಸರಾ-2025ರ (Mysuru Dasara 2025) ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು (Gold Card) ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ.
ಹೌದು.. ಈ ಬಾರಿಯ ಮೈಸೂರು ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಎಲ್ಲವನ್ನೂ ಕಣ್ತುಂಬಿಕೊಳ್ಳಬೇಕು ಎನ್ನುವವರಿಗೆ ಜಿಲ್ಲಾಡಳಿತ, 6500 ರೂಪಾಯಿ ಗೋಲ್ಡ್‌ ಕಾರ್ಡ್‌, ಟಿಕೆಟ್‌ ಗಳನ್ನು ಬಿಡುಗಡೆ ಮಾಡಿದೆ. ಸೆ.22 ರಿಂದ ಅ.2 ರವರೆಗೆ ನಡೆಯಲಿರುವ ದಸರಾದಲ್ಲಿ ಗೋಲ್ಡ್‌ ಕಾರ್ಡ್‌ ಪಡೆದು ಎಲ್ಲ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ. ಈ ಸಂಬಂಧ ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಅವರು ಪ್ರಕಟಣೆ ಹೊರಡಿಸಿದ್ದಾರೆ.

*ಯಾವುದಕ್ಕೆ ಎಷ್ಟು ಟಿಕೆಟ್?:*
ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ, ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳ ಮಾರಾಟ ಆರಂಭವಾಗಿದೆ. ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನು ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಟಿಕೆಟ್ 3500 ಹಾಗೂ ಪಂಜಿನ ಕವಾಯತು ಟಿಕೆಟ್‌ಗೆ 1500 ರೂಪಾಯಿ ನಿಗದಿ ಮಾಡಲಾಗಿದ್ದು, ಆನ್​​ಲೈನ್​ ಮೂಲಕ ಸಹ ಪಡೆಯಬಹುದಾಗಿದೆ. ಸಾರ್ವಜನಿಕರಿಗೆ ದಸರಾ ಗೋಲ್ಡ್‌ ಕಾರ್ಡ್ ಮತ್ತು ಟಿಕೆಟ್‌ಗಳನ್ನು ಮೈಸೂರು ದಸರಾ ಅಧಿಕೃತ ಜಾಲತಾಣ https://mysoredasara.gov.in/ ಮೂಲಕ ಖರೀದಿಸಬಹುದಾಗಿದೆ.

https://mysoredasara.gov.in/ ಅಧಿಕೃತ ಜಾಲತಾಣದಲ್ಲಿ ಶನಿವಾರ ಮಧ್ಯಾಹ್ನ 3ರಿಂದಲೇ ಆನ್​​ ಲೈನ್​​ ನಲ್ಲಿ ಖರೀದಿಗೆ ಲಭ್ಯ ಇದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗೋಲ್ಡ್​ ಕಾರ್ಡ್​ ಖರೀದಿಸಿರುವವರೆಗೆ(ಒಂದಕ್ಕೆ 6500) ಚಾಮರಾಜೇಂದ್ರ ಮೃಗಾಲಯ, ಚಾಮುಂಡಿ ಬೆಟ್ಟ(ವಿಶೇಷ ದರ್ಶನಕ್ಕೆ), ಮೈಸೂರು ಅರಮನೆಗೆ ಒಂದು ಬಾರಿ ಉಚಿತವಾಗಿ ಪ್ರವೇಶ ದೊರೆಯಲಿದೆ. ಡ್ರೋನ್ ಶೋ, ಜಂಬೂಸವಾರಿ ಹಾಗೂ ಪಂಜಿನ ಕವಾಯಿತು ವೀಕ್ಷಣೆಗೆ ಪ್ರತ್ಯೇಕವಾಗಿ ಆಸನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

*ಆನ್​​ಲೈನ್​​ನಲ್ಲಿ ಟಿಕೆಟ್​ ಖರೀದಿ ವಿಧಾನ:*
ಮೈಸೂರು ದಸರಾ ಅಧಿಕೃತ ವೆಬ್​ಸೈಟ್ https://www.mysoredasara.gov.in ಗೆ ಭೇಟಿ ನೀಡಿ.

ಹೋಮ್​ ಪೇಜ್​ನಲ್ಲಿ ಟಿಕೆಟ್​ಗಳು ಮತ್ತು ಲೈವ್​ ಅಂತ ಕಾಣುತ್ತದೆ.
ಅದರ ಮೇಲೆ ಕ್ಲಿಕ್​ ಮಾಡಿದ ನಂತರ ಆಯ್ಕೆ ಕೇಳುತ್ತದೆ
ಟಿಕೆಟ್​ ಬುಕ್ಕಿಂಗ್​ ಮೇಲೆ ಕ್ಲಿಕ್​ ಮಾಡಿ.

ನಂತರ ಟಿಕೆಟ್​ ಬುಕ್ಕಿಂಗ್​ ಪೇಜ್​ ತೆರಯುತ್ತದೆ.

ಕೆಳಗಡೆ ಬಂದರೆ ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಪಂಜಿನ ಕವಾಯಿತು ಬನ್ನಿಮಂಟಪ, ದಸರಾ 2024 ಜಂಬೂ ಸವಾರಿ ದರ ಸಮೇತ ಆಯ್ಕೆ ತೋರಿಸಲಾಗಿರುತ್ತದೆ.

ಬಳಿಕ, ಟಿಕೆಟ್​ ಖರೀದಿ ಎಂಬುವುದರ ಮೇಲೆ ಕ್ಲಿಕ್​ ಮಾಡಿ, ಮತ್ತೊಂದು ಪೇಜ್​ ತೆರೆಯುತ್ತದೆ.

ಅಲ್ಲಿ ಎಷ್ಟು ಟಿಕೆಟ್​ ಅಂತ ಕ್ಲಿಕ್​ ಮಾಡಿ. ನಂತರ buy tickets ಮೇಲೆ ಕ್ಲಿಕ್​ ಮಾಡಿ.
ನಿಮ್ಮ ಸಂಪೂರ್ಣ ಮಾಹಿತಿ ದಾಖಲಿಸಿ, ಹಣ ಪಾವತಿಸಿ ಟಿಕೆಟ್​ ಪಡೆದುಕೊಳ್ಳಿ.

ಇತ್ತೀಚಿನ ಸುದ್ದಿ

ಜಾಹೀರಾತು