6:56 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Mangaluru | ಸೆಪ್ಟೆಂಬರ್ 11: ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ

09/09/2025, 13:57

ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆ. 11ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ.

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಹಾಗೂ ಪ್ರಧಾನ ಕಾರ್ಯದರ್ಶಿ ಸುನಿಲ್‍ಕುಮಾರ್ ಬಜಾಲ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾಡಿನ ಖ್ಯಾತ ಸಾಹಿತಿಗಳಾದ ಡಾ. ಕೆ. ಶರೀಫಾ ಹಾಗೂ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷರಾದ ಅತೀ. ವಂ. ಡಾ| ಎಲೋಶಿಯಸ್ ಪೌಲ್ ಡಿ’ಸೋಜರವರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ವಹಿಸಲಿದ್ದಾರೆ. ಅಂದು ಬೆಳಿಗ್ಗೆ 8.30ಕ್ಕೆ ಏಕತಾರಿ ಹಾಡುಗಾರರಾದ ನಾದಾ ಮಣಿನಾಲ್ಕೂರುರವರಿಂದ ‘ಪ್ರೀತಿಯ ಸಿಂಚನ’ ಎಂಬ ‘ಸೌಹಾರ್ದ ಗಾಯನ’ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಮೂಲನಿವಾಸಿಗಳಾದ ಕೊರಗ ಸಮುದಾಯದ ಏಳಿಗೆಗಾಗಿ ಅವಿಶ್ರಾಂತವಾಗಿ ಶ್ರಮಿಸಿದ ಹಿರಿಯ ಚೇತನ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ನಾಯಕರಾದ ಹಾಗೂ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ವಿಜೇತರಾದ ಕರಿಯ ಕೆ. ಇವರನ್ನು ಸಾರ್ವಜನಿಕವಾಗಿ ಸನ್ಮಾನಿಸಲಾಗುವುದು.
ಪ್ರೀತಿ ಮತ್ತು ಸೇವೆಯ ಮೂಲಕ ಜಗತ್ತಿಗೆ ಮಹಾತಾಯಿ ಎಂದು ಗುರುತಿಸಿಕೊಂಡಿರುವ ಸಂತ ಮದರ್ ತೆರೇಸಾರವರ ವಿಚಾರ ಧಾರೆಯನ್ನು ಇಂದಿನ ಯುವಪೀಳಿಗೆಗೆ ತಿಳಿಸಿಕೊಡುವ ಮಹತ್ತರ ಜವಾಬ್ದಾರಿ ಸಮಾಜದ ಮೇಲಿದೆ. ಕಳೆದ 8 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಲ್ಲಿ ಸರ್ವಧರ್ಮದ ಸೌಹಾರ್ದಪ್ರಿಯ ಜನತೆ, ವಿದ್ಯಾರ್ಥಿ, ಯುವಜನ, ಮಹಿಳಾ, ದಲಿತ, ಆದಿವಾಸಿ, ರೈತ, ಕಾರ್ಮಿಕ ಸಂಘಟನೆಗಳ ನಾಯಕರು, ಮಧ್ಯಮವರ್ಗದ ನೌಕರರು, ಸಾಹಿತಿಗಳು, ಪ್ರಗತಿಪರ ಚಿಂತಕರು, ಶಿಕ್ಷಣ ತಜ್ಞರು, ವಕೀಲರು, ವೈದ್ಯರು, ಬುದ್ದಿಜೀವಿಗಳನ್ನೊಳಗೊಂಡ ಜಾತ್ಯಾತೀತ ನೆಲೆಗಟ್ಟಿನ ಮನಸ್ಸುಗಳು ಸೌಹಾರ್ದ ತಂಡವಾಗಿ ವಿವಿಧ ಹಂತದ ಕಾರ್ಯಕ್ರಮಗಳನ್ನು ವರ್ಷವಿಡೀ ಆಯೋಜಿಸಲಾಗುತ್ತದೆ. ಪ್ರತಿಯೊಂದು ಧರ್ಮದ ಹಬ್ಬಗಳು ಸರ್ವಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ಸೌಹಾರ್ದ ದೀಪಾವಳಿ, ಸೌಹಾರ್ದ ಕ್ರಿಸ್‍ಮಸ್, ಸೌಹಾದ್ ಇಫ್ತಾರ್‍ಕೂಟ ಹಾಗೂ ನಾಡಹಬ್ಬ ದಸರಾವನ್ನು ಸಾಮರಸ್ಯ ದಸರವನ್ನಾಗಿ ಆಚರಿಸಲಾಗುತ್ತಿದೆ. ಮದರ್ ತೆರೇಸಾರವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ ಹಿನ್ನೆಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ‘ಚಿಣ್ಣರ ಕಲರವ’ ಎಂಬ ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಕೂಡ ನಡೆಸಲಾಗಿದೆ. ಸೌಹಾರ್ದತೆ ಹಾಗೂ ಜನತೆಯ ಬದುಕಿನ ಪ್ರಶ್ನೆಗಳು ಎದುರಾದಾಗ ಇತರ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡು ಶಕ್ತಿಮೀರಿ ಶ್ರಮಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ
*ಸಂತೋಷ್ ಡಿ’ಸೋಜ ಬಜ್ಪೆ( ಅಧ್ಯಕ್ಷರು, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ)), ಇಲಿಯಾಸ್ ಫೆರ್ನಾಂಡಿಸ್( ಉಪಾಧ್ಯಕ್ಷರು, ಸಂತ ಮದರ್ ತೆರೇಸಾ ವಿಚಾರ ವೇದಿಕೆ), ಮಂಜುಳಾ ನಾಯಕ್ ( ಅಧ್ಯಕ್ಷರು, ಸಾಮರಸ್ಯ, ಮಂಗಳೂರು)_
ರಾಕೇಶ್ ಕುಂದರ್( ದಲಿತ ಚಳುವಳಿಯ ಯುವ ನಾಯಕರು), ರೆಹಮಾನ್‍ಖಾನ್ ಕುಂಜತ್ತಬೈಲ್ ( ಸಾಮಾಜಿಕ ಚಿಂತಕರು), ಸುಮತಿ ಎಸ್. ಹೆಗ್ಡೆ,(ಜಿಲ್ಲಾ ಮಹಿಳಾ ಮುಖಂಡರು), ಡೋಲ್ಫಿ ಡಿಸೋಜ ,ವಿಲ್ಮಾ ಮೊಂತೆರೋ, ಜ್ಯೋತಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು