9:17 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Mangaluru | 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿ: ಕೊನೆಗೂ ಇಬ್ಬರು ಆರೋಪಿಗಳ ಬಂಧನ

09/09/2025, 21:16

ಮಂಗಳೂರು(reporterkarnataka.com): ಸುಮಾರು 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾದ ಆರೋಪಿಗಳ ಬಂಧಿಸಲಾಗಿದೆ.
ತಲೆಮರೆಸಿಕೊಂಡಿದ್ದ ಆರೋಪಿ ಲೀಲಾಧರ್ ಎಂಬವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಮೇರೆಗೆ ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ. ಇದೇ ಪ್ರರಕಣದಲ್ಲಿ ದುಬೈಗೆ ಪರಾರಿಯಾಗಿದ್ದ ಇನೋರ್ವ ಆರೋಪಿ ಚಂದ್ರಹಾಸ್ ಕೇಶವ ಶೆಟ್ಟಿ ಅವರನ್ನು ಇತ್ತೀಚೆಗೆ ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
1998 ಡಿಸೆಂಬರ್ 31ರಂದು ಮುಲ್ಕಿ ಠಾಣಾ ಸರಹದ್ದಿನ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆ ಅ. ಕ್ರ.𝟬𝟲/𝟭𝟵𝟵𝟵 ಕಲಂ 143, 147, 148, 436, 427 r/w 149 IPC ಪ್ರಕರಣದಲ್ಲಿ, ಆರೋಪಿಗಳ ಪೈಕಿ ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ರವರು ಘಟನೆ ನಡೆದಾಗಿನಿಂದ ಪೊಲೀಸರಿಗೆ ಸಿಗದೇ ಪರಾರಿಯಾಗಿದ್ದರಿಂದ ಹಿಂದಿನ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡದ್ದ ಬಗ್ಗೆ ಉಲ್ಲೇಖಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ ಹಿರಿಯ CJ & JMFC ನ್ಯಾಯಾಲಯ ಮೂಡಬಿದ್ರಿರವರು CC. No 665/2014, LPC No 10/2017 ಪ್ರಕರಣವೆಂದು ಘೋಷಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 𝟮𝟲 ವರ್ಷಗಳಿಂದ ತಲೆಮರೆಸಿಕೊಂಡಿರುವ LPC warrant ಆಸಾಮಿ ಲೀಲಾಧರ್ ( 52) ಎಂಬವನನ್ನು ಇತ್ತೀಚೆಗೆ ಸ್ವದೇಶಕ್ಕೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ಈ ದಿನ ದಸ್ತಗಿರಿ ಮಾಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ.
ಅದೇರೀತಿ ಇತ್ತೀಚೆಗೆ ಇದೇ ಪ್ರಕರಣದ ಇನ್ನೊಬ್ಬ ಆರೋಪಿ
ಚಂದ್ರಹಾಸ್ ಕೇಶವ ಶೆಟ್ಟಿ (59) ಎಂಬಾತನನ್ನು ಸಹ ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ನ್ಯಾಯಾಲಯದಿಂದ ಹೊರಡಿಸಿದ್ದ ಉದ್ಘೋಷನೆ ಆದೇಶ ಉಲ್ಲಂಘಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ಇವರ ಇಬ್ಬರ ವಿರುದ್ದ ಪ್ರತ್ಯೇಕವಾಗಿ 88/2025 ಮತ್ತು 94/2025 ಕಲಂ 208, 209 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು