1:34 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆ

10/09/2025, 11:08

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು.

ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಮನೋಜ್ ಶಾಂತಿ ಸವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ , ನಿರ್ದೇಶಕರುಗಳಾದ ರಮಾನಾಥ್ ಸನಿಲ್, ದಿವಾಕರ್ ಬಿಪಿ, ಗೋಪಾಲ್ ಎಂ, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ವಾಮನ್ ಕೆ. ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು