ಇತ್ತೀಚಿನ ಸುದ್ದಿ
Kodagu | ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಯ ಮೇಲೆ ಗಂಭೀರ ಹಲ್ಲೆ: ಮೈಸೂರು ಆಸ್ಪತ್ರೆಗೆ ದಾಖಲು
11/09/2025, 11:17

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಂದಿ ಬಸವನಹಳ್ಳಿ ಸಮೀಪದ ಕಲ್ಲು ಕೋರೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ ವ್ಯಕ್ತಿ ಮೇಲೆ ಮಾರನಂತಿಕ ಹಲ್ಲೆ ನಡೆದಿದೆ. ಗ್ರಾಮದಲ್ಲಿ ಮಂಜು ಎಂಬಾತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ, ಇದನ್ನು ಪ್ರಶ್ನಿಸಿದ ರವಿ ಮೇಲೆ ಮಂಜು ಹಲ್ಲೆ ಮಾಡಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಗೆ ಒಳಗಾದ ರವಿಯನ್ನು ಮಡಿಕೇರಿಯ ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಿ, ರವಿಯ ಸ್ಥಿತಿ ಚಿಂತಾಜನಕ ವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ.