ಇತ್ತೀಚಿನ ಸುದ್ದಿ
ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ: ಅದ್ಯಪಾಡಿಗೆ ಸರಕಾರಿ ಬಸ್ ಮತ್ತೆ ಆರಂಭಿಸಲು ಆಗ್ರಹ
11/09/2025, 11:27

ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.
ಮಂಗಳೂರು ಅದ್ಯಪಾಡಿಗೆ ಇದ್ದಂತಹ ಸರಕಾರಿ ಬಸ್ಸು ಪ್ರಸ್ತುತ ಸ್ಥಗಿತಗೊಂಡಿದ್ದು ಪುನರ್ ಪ್ರಾರಂಬಿಸುವಂತೆ ಮನವಿ ಸ್ವೀಕರಿಸಲಾಯಿತು.
ಮಂಗಳೂರಿನಿಂದ -ಗುರುಪುರ-ಕೈಕಂಬ ಮಾರ್ಗವಾಗಿ ಕಟೀಲ್ ಕ್ಷೇತ್ರಕ್ಕೆ ಸರಕಾರಿ ಬಸ್ಸು ವ್ಯವಸ್ಥೆ ಕಲ್ಪಿಸುವಂತೆ ಸದಸ್ಯರು ಸಭೆಯಲ್ಲಿ ಬೇಡಿಕೆ ಇಟ್ಟಾಗ ಈ ಬಗ್ಗೆ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ನಿರ್ಮಲಾ ಎ. (ಸಹಾಯಕ ವ್ಯವಸ್ಥಾಪಕರು ಕೆ,.ಎಸ್.ಆರ್.ಟಿ.ಸಿ ಮಂಗಳೂರು) ಅವರು ಸಭೆಯಲ್ಲಿ ತಿಳಿಸಿದರು.
ತಾಲೂಕು ಪಂಚಾಯತ್ ಸಹಾಯಕ ಲೆಕ್ಕಧಿಕಾರಿ ಪರಮೇಶ್ವರ ಅವರು ಸಮಿತಿಯ ಸದಸ್ಯರು ಹಾಗೂ ಇಲಾಖಾ ಅಧಿಕಾರಿಗಳಿಗೆ ಸ್ವಾಗತಿಸಿದರು. ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಇವರು ಧನ್ಯವಾದ ಸಮರ್ಪಿಸಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, ಮೊಹಮ್ಮದ್ ರಫೀಕ್, ರಿತೇಶ್ ಅಂಚನ್, ಜಯಂತಿ, ವಿದ್ಯಾ, ಶ್ರೀಧರ ಪಂಜ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಪಂ ಅಧಿಕಾರಿ ವರ್ಗದವರು, ತಾಲೂಕು ಐಇಸಿ ಸಂಯೋಜಕರು ಹಾಜರಿದ್ದರು.