ಇತ್ತೀಚಿನ ಸುದ್ದಿ
Shivamogga | ಕರಾಟೆ: ರಾಜ್ಯಮಟ್ಟಕ್ಕೆ ವಾಗ್ದೇವಿ ಸಂಸ್ಥೆಯ 6 ವಿದ್ಯಾರ್ಥಿಗಳು ಆಯ್ಕೆ
15/09/2025, 11:30

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ್ದ 14ರಿಂದ 17 ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಕರಾಟೆ ಪಂದ್ಯದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾಗಿರುವ ವಾಗ್ದೇವಿ ಸಂಸ್ಥೆಯ ಪ್ರೌಢಶಾಲೆಯ ಸಾನ್ವಿ ಜೋಯಿಸ್, ಶೀತಲ್ ಅದ್ವೈತ್ , ಅನುಷ್ಕಾ ಆರ್ ನಾಯಕ್, ಈಶಾನ ಗೌಡ,ಆದಿತ್ಯ ಕರಾಟೆ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಸದಸ್ಯರು ಶಿಕ್ಷಕ ವೃಂದ ಮತ್ತು ಪೋಷಕರು ಅಭಿನಂದಿಸಿ ಮುಂದಿನ ಸ್ಪರ್ಧೆಗೆ ಶುಭ ಹಾರೈಸಿರುತ್ತಾರೆ.