5:07 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳದ ದಂಪತಿಯಿಂದ ಗಾಂಜಾ ಮಾರಾಟ:1 ಕೆಜಿ 166 ಗ್ರಾಂ ಮಾಲು ವಶ; ಬಂಧನ

15/09/2025, 17:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಚೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬಂದ, ನಿಷೇಧಿತ ಮಾದಕ ಹಿನ್ನಲೆಯಲ್ಲಿ ವಸ್ತುಗಳ ಮಾರಾಟ/ಸರಬರಾಜು / ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಿದ್ದಾಪುರ ಮತ್ತು ಮಡಿಕೇರಿ ಪೊಲೀಸರು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪಶ್ಚಿಮ ಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಲೈನ್‌ಮನೆ ನಿವಾಸಿಗಳಾದ ಅರ್ಚನಾ ಸರ್ದಾರ್(30) ಮತ್ತು ತಪಾನ್ ಸರ್ದಾರ್(38) ಎಂಬುವವರನ್ನು ಬಂಧಿಸಿ, ಬಂಧಿತರಿಂದ 01 ಕೆ.ಜಿ 166 ಗ್ರಾಂ ಗಾಂಜಾ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು