4:29 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಪರಿಹಾರ ಘೋಷಣೆ

17/09/2025, 12:22

ಬೆಂಗಳೂರು(reporterkarnataka.com): ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ನಡೆದ-ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಹಲವು ವರ್ಷಗಳ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ‌. ತಿಮ್ಮಾಪೂರ ಅವರು ಸಂತಸ ವ್ಯಕ್ತಪಡಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಯಾಗುವ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಅದರಂತೆ ನಮ್ಮ ಸರ್ಕಾರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಕೊಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಜೊತೆಗೆ ಕಾಲುವೆ ನೀರ್ಮಾಣಕ್ಕೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ ಜಮೀನಿಗೆ 30 ಲಕ್ಷ, ಒಣ ಭೂಮಿಗೆ 25 ಲಕ್ಷ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.
ಆಲಮಟ್ಟಿ ಜಲಾಶಯವನ್ನು
519ರಿಂದ 524 ಮೀಟರ್‌ ರವರೆಗೂ ಎತ್ತರಿಸುವುದರಿಂದ 75 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಹಿನ್ನೀರಿನಲ್ಲಿ ಮುಳುಗಡೆಯಾಗಲಿದೆ. ಒಂದೇ ಹಂತದಲ್ಲಿ ಭೂಸ್ವಾಧೀನ ಖರೀದಿ ಮೂಲಕ ಸ್ವಾಧೀನಕ್ಕೆ ತೀರ್ಮಾನ ಮಾಡಲಾಗಿದೆ.
ಹಿಂದಿನ ಸರ್ಕಾರದಲ್ಲಿ ಒಣಭೂಮಿಗೆ 20 ಲಕ್ಷ, ನೀರಾವರಿಗೆ 24 ಲಕ್ಷ ತೀರ್ಮಾನ ಮಾಡಿತ್ತು. ಆದರೆ ರೈತರು ಒಪ್ಪಿರಲಿಲ್ಲ. ಹಾಗಾಗಿ, ರೈತ ಸಂಘಟನೆಗಳು, ಎಲ್ಲಾ ಪಕ್ಷದ ಶಾಸಕರೊಂದಿಗೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಹಲವು ಸಭೆ ನಡೆಸಿ, ಅಭಿಪ್ರಾಯ ಪಡೆದಿದ್ದರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಇವತ್ತಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗಿದೆ‌. ಇದರಿಂದ ನಮ್ಮ ಭಾಗದ ಜನರಿಗೆ ಸಂತಸ ಆಗಲಿದೆ. ನುಡಿದಂತೆ ನಡೆಯುವುದು ನಮ್ಮ ಸರ್ಕಾರ. ಜನರಿಗೆ ನೀಡಿದ್ದ ಭರವಸೆಯಂತೆ ಈಡೇರಿಸಲಾಗುತ್ತಿದೆ‌. ಹುಟ್ಟುಹಬ್ಬದ ದಿನದಂದೇ ನಮ್ಮ ಭಾಗದ ಜನರ ಹೋರಾಟಕ್ಕೆ ಫಲ ಸಿಕ್ಕಿರುವುದು ಮತ್ತಷ್ಟು ನನಗೆ ಸಂತಸ ತಂದಿದೆ ಎಂದು ಸಚಿವ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು