ಇತ್ತೀಚಿನ ಸುದ್ದಿ
ಮೈಸೂರು | ಮುಡಾ ಹಗರಣ: ಇಡಿ ಅಧಿಕಾರಿಗಳಿಂದ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ
17/09/2025, 18:37

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.
ದಾಳಿ ನಂತರ ಕೆಲವು ತಿಂಗಳಿನಿಂದ ನಾಪತ್ತೆ ಯಾಗಿದ್ದ ದಿನೇಶ್ ಕುಮಾರ್ ಅವರಿಗೆ ಇಂದು ಇಡಿ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಬಂದ ಸಮಯದಲ್ಲಿ ದಿನೇಶ್ ಕುಮಾರ್ ಅವರನ್ನು ಬಂಧನ ಮಾಡಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ದಿನೇಶ್ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಸಾಬೀತಾಗಿದೆ ಎಂದು ಇಡಿ ಈ ಹಿಂದೆನೇ ಹೇಳಿತ್ತು.