11:00 PM Thursday29 - January 2026
ಬ್ರೇಕಿಂಗ್ ನ್ಯೂಸ್
ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಎಸ್.ಜೆ.ಇ.ಸಿ. ಮಹಿಳಾ ತಂಡ ಚಾಂಪಿಯನ್

17/09/2025, 21:19

ಮಂಗಳೂರು(reporterkarnataka.com): ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ತಂಡವು ಸಪ್ಟೆಂಬರ್ 11 ಮತ್ತು 12 ರಂದು ಮಂಡ್ಯದ ಪಿ.ಎಸ್. ಸಿ. ಇ. ನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರ ಟ್ರೋಫಿಯನ್ನು ಪಡೆದುಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿತು. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ತೃತೀಯ ವರ್ಷದ ಟ್ರಿವಿಯಾ ಕ್ರೆಡಾ ವೇಗಸ್ ಅವರಿಗೆ ಪಂದ್ಯಾವಳಿಯ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿ ದೊರಕಿತು. ಕ್ರೀಡಾ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ. ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಅವರ ಮಾರ್ಗದರ್ಶನದಲ್ಲಿ ತಂಡಗಳು ಶ್ರೇಷ್ಠ ಕೌಶಲ್ಯವನ್ನು ಪ್ರದರ್ಶಿಸಿದವು. ವಿಜೇತ ತಂಡವು ಟ್ರಿವಿಯಾ ಕ್ರೆಡಾ ವೇಗಸ್ , ತ್ರಿಶಾ ಕ್ಲಾರಿಸ್ ವೇಗಸ್, ಕ್ರಿಸ್ಟಲ್ ಡ್ಯಾಪ್ನಿ ಮೊಂತೇರೊ ಸೇರಿದಂತೆ ಅನೇಕ ವಿಭಾಗಗಳ ಪ್ರತಿಭಾನ್ವಿತ ಆಟಗಾರರನ್ನು ಒಳಗೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು