1:42 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ ಬಗ್ಗೆ ಚರ್ಚೆ

18/09/2025, 20:11

ಬೆಂಗಳೂರು(reporterkarnataka.com): ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ರಾಜ್ಯದ ರೈತರ ಸಮಸ್ಯೆ ಬಗ್ಗೆ ಚರ್ಚೆ ನಡೆಸಿತು.
ಮಳೆ ಹಾನಿ ಬೆಳೆ ನಷ್ಟ ಪರಿಹಾರ ಹೆಚ್ಚಿಸುವ ಭರವಸೆ ಮುಖ್ಯಮಂತ್ರಿ ಅವರಿಂದ ಮುಖ್ಯಮಂತ್ರಿ ನಿವಾಸದಲ್ಲಿ ಬೇಟಿಯಾದ ಸಂದರ್ಭದಲ್ಲಿ ದೊರೆಯಿತು.
ರಾಜ್ಯಾದ್ಯಂತ ಇರುವ 38,000 ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಯೋಜನೆಯ ರೂಪಿಸಿ ಅನುದಾನ ನಿಗದಿ ಮಾಡಬೇಕು, 2025- 26ರಲ್ಲಿ ಕಬ್ಬಿನ ಉತ್ಪನ್ನ ವೆಚ್ಚ ಏರಿಕೆಯಾಗಿದ್ದು ಎಫ್‌ಆರ್‌ಪಿ ದರ ಸಮಂಜಸವಾಗಿಲ್ಲ. ಕಬ್ಬಿನ ಎಫ್‌ಆರ್‌ಪಿ ದರಕ್ಕೆ ಹೆಚ್ಚುವರಿಯಾಗಿ ರಾಜ್ಯ ಸಲಹಾ ಬೆಲೆ (ಎಸ ಎ ಪಿ) ನಿಗದಿ ಮಾಡಬೇಕು, 2023-24ನೇ ಸಾಲಿನಲ್ಲಿ ಕಬ್ಬಿಗೆ ಹೆಚ್ಚುರಿಯಾಗಿ ನಿಗದಿಪಡಿಸಿರುವ ಟನ್ 150 ರೂ ಬಾಕಿ ಹಣ ರೈತರಿಗೆ ಕೂಡಿಸಬೇಕು ಎಂದು ಆಗ್ರಹಿಸಲಾಯಿತು.
ರಾಜ್ಯಾದ್ಯಂತ ಅತಿವೃಷ್ಟಿ ಮಳೆ ಹಾನಿ ಪರಿಹಾರವನ್ನು ವೈಜ್ಞಾನಿಕವಾಗಿ ನಿರ್ಧರಿಸಿ ಮಳೆ ಆಶ್ರಯ ಎಕ್ರೆಗೆ 25,000 ನೀರಾವರಿ 40,000 ರೈತರಿಗೆ ವಿತರಿಸುವಂತೆ ಸೂಚನೆ ನೀಡಬೇಕು, ಕೆಐಡಿಬಿ ರೈತರ ಜಮೀನು ವಶಪಡಿಸಿಕೊಂಡು 25 ವರ್ಷವಾದರೂ ಯಾವುದೇ ಉದ್ದೇಶಕ್ಕೆ ಬಳಸದೆ ಖಾಲಿ ಬಿಟ್ಟಿರುವ ಜಮೀನುಗಳನ್ನು ರೈತರಿಗೆ ವಾಪಸ್ ನೀಡಬೇಕು, ಭತ್ತ. ರಾಗಿ. ಜೋಳ. ಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಖಾತ್ರಿ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ ನಿರ್ಧಾರ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಜೊತೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳಿಗೂ ಖರೀದಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.


ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಬಲ್ಲೂರ್ ರವಿಕುಮಾರ್, ಗದಗ್ ಜಿಲ್ಲಾಧ್ಯಕ್ಷ ರವಿಕುಮಾರ್,ಹಸಿರು ಸೇನೆ ಕರ್ನಾಟಕ ರಾಜ್ಯಾಧ್ಯಕ್ಷ ಕರಬಸಪ್ಪಗೌಡ,ಸಂಘಟನಾ ಕಾರ್ಯದರ್ಶಿಅತ್ತಹಳ್ಳಿ ದೇವರಾಜ್,ರಾಜ್ಯ ಉಪಾಧ್ಯಕ್ಷರು
ಎನ್‌.ಹೆಚ್.ದೇವಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಬರಡನಪುರ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು