2:16 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ವಿವಾದ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಪ್ರಕರಣ

18/09/2025, 20:13

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರು ದಸರಾ ಉದ್ಘಾಟನೆಯ ವಿವಾದ ಕುರಿತು ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧಾರಿಸಿದೆ.
ವಿಶ್ವವಿಖ್ಯಾತ ಮೈಸೂರು ದಸರಾ-2025ರ ಉದ್ಘಾಟನೆಗೆ ಬೂಕರ್​ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್​ ಅವರನ್ನು ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಕೊಂಡಿದೆ.
ಸೆಪ್ಟೆಂಬರ್ 22ರಂದು ಉತ್ಸವ ಪ್ರಾರಂಭವಾಗಲಿದ್ದು, ಈ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರಿದ್ದ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ಒತ್ತಾಯಿಸಿದರು.
ಮೈಸೂರಿನಲ್ಲಿನ ಚಾಮುಂಡೇಶ್ವರಿಗೆ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಅವಕಾಶ ನೀಡಲಾಗಿದೆ. ಇದು ಅಲ್ಲಿನ ಸಂಪ್ರದಾಯಗಳಿಗೆ ವಿರುದ್ಧ. ಹೀಗಾಗಿ, ಪ್ರಕರಣದ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ವಕೀಲರು ಹೇಳಿದಾಗ, ಸಿಜೆಐ ಗವಾಯಿ ಅವರು ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದರು.
ಬಾನು ಮುಷ್ತಾಕ್​ ಅವರನ್ನು ಮೈಸೂರು ದಸರಾ ಉದ್ಘಾಟಕರನ್ನಾಗಿ ಕರ್ನಾಟಕ ಸರ್ಕಾರ ಆಹ್ವಾನಿಸಿದೆ. ಇದು ಕನ್ನಡಪರ ಮತ್ತು ಹಿಂದು ಸಂಘಟನೆಗಳ ವಿರೋಧಕ್ಕೆ ಕಾರಣವಾಗಿದೆ. ಮುಷ್ತಾಕ್ ಅವರು ಈ ಹಿಂದೆ ಹಿಂದೂ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆ ಬಳಿಕ ಈ ವಿವಾದ ಉದ್ಭವಿಸಿದ್ದು, ಕರ್ನಾಟಕ ಹೈಕೋರ್ಟ್​ನಲ್ಲಿ ಇದೇ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಪೀಠ, ಮೈಸೂರಿನ ಮಾಜಿ ಸಂಸದ ಪ್ರತಾಪ್​ ಸಿಂಹ ಅವರು ಸಲ್ಲಿಸಿದ ಅರ್ಜಿ ಸೇರಿದಂತೆ ಎಲ್ಲ ಮನವಿಗಳನ್ನು ವಜಾ ಮಾಡಿತ್ತು,ಯಾವುದೇ ಸಾಂವಿಧಾನಿಕ ಅಥವಾ ಕಾನೂನು ಉಲ್ಲಂಘನೆಯಾಗಿದೆ ಎಂಬುದು ಕಂಡುಬಂದಿಲ್ಲ. ಅದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮವನ್ನು ಬೇರೆ ಧರ್ಮದ ವ್ಯಕ್ತಿಯೊಬ್ಬರು ಉದ್ಘಾಟಿಸುವುದರಿಂದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಯಾವುದೇ ಮೌಲ್ಯಗಳು ಉಲ್ಲಂಘನೆಯಾಗುತ್ತವೆ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅರ್ಜಿಗಳನ್ನು ವಜಾಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು