4:21 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ: ದಿನೇಶ್ ಗೂಳಿಗೌಡ

18/09/2025, 20:20

ದೇವನಹಳ್ಳಿ (reporterkarnataka.com): 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ವಾಗ್ದಾನದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕಳೆದ 21 ತಿಂಗಳಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗಾಗಿ 98 ಸಾವಿರ ಕೋಟಿ ರೂ. ಹಣವನ್ನು ವ್ಯಯ ಮಾಡಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.


ದೇವನಹಳ್ಳಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೋರೋನಾದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಮಹಿಳೆಯರಿಗೆ ಪಂಚ ಗ್ಯಾರಂಟಿಗಳು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದವು ಎಂದರು.
ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತಾ ಬಂದಿದ್ದು ಇದುವರೆಗೆ 52 ಸಾವಿರ ಕೋಟಿ ರೂ. ಹಣವನ್ನು ನೀಡಿದ್ದರೆ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಮೂಲಕ 18,139 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವ್ಯಯಿಸಿದೆ.
ಶಕ್ತಿ ಯೋಜನೆಯಡಿ 544 ಕೋಟಿ ಟಿಕೆಟ್ ಗಳು ಮಾರಾಟವಾಗಿದ್ದು ಇದಕ್ಕಾಗಿ 140268 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಿದೆ. ಅನ್ನಭಾಗ್ಯ ಯೋಜನೆಯಡಿ 4.5 ಕೋಟಿ ಕುಟುಂಬದ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ವಿತರಿಸುತ್ತಿದ್ದರೆ ಯುವನಿಧಿ ಯೋಜನೆಯಡಿ 2.55 ಲಕ್ಷ ಯುವಕರಿಗೆ 623 ಕೋಟಿ ರೂ. ಹಣ ನೀಡಲಾಗಿದೆ ಎಂದರು.
ಇಷ್ಟೊಂದು ಪ್ರಮಾಣದಲ್ಲಿ ಹಣ ವ್ಯಯಿಸಿದರೂ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ. 4 ಲಕ್ಷ ಕೋಟಿ ರೂ. ಬಜೆಟ್ ಗಾತ್ರವಿದ್ದು ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಸರ್ಕಾರಿ ನೌಕರರ ವೇತನಕ್ಕೆ 1.20 ಲಕ್ಷ ಕೋಟಿ, ಪಿಂಚಣಿ, ಮಾಸಾಶನಕ್ಕಾಗಿ 1.12 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಇದರ ಜೊತೆಗೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಕೂಡ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. ಹೀಗಿರುವಾಗ ಸರ್ಕಾರ ಹೇಗೆ ದಿವಾಳಿಯಾಗಲು ಸಾಧ್ಯ? ಟೀಕಿಸುವವರ ಟೀಕೆಗೆ ಕಿವಿಕೊಡದೇ ದನಿ ಇಲ್ಲದವರಿಗೆ ದನಿಯಾಗಿರುವ ಕಾಂಗ್ರೆಸ್ ಸರ್ಕಾರದ ಪರ ಮಹಿಳೆಯರು ದನಿ ಎತ್ತಬೇಕು ಎಂದು ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿಯಪ್ಪ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಸೂರಜ್ ಹೆಗ್ಗಡೆ, ಶಾಸಕರಾದ ಶರತ್ ಬಚ್ಚೇಗೌಡ, ವಿಧಾನಪರಿಷತ್ ಸದಸ್ಯರಾದ ರವಿ, ಮಾಜಿ ಶಾಸಕರಾದ ವೆಂಕಟರಮಣೇಗೌಡ, ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಅನುರಾಧಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ ಸೇರಿದಂತೆ ನಾನಾ ಗಣ್ಯರು, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು