8:11 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಹಳೆಯ ಕಟ್ಟಡಗಳಿಗೆ ಸೆಸ್ ಪಡೆಯಬಾರದು: ಕುಶಾಲನಗರ ಚೇಂಬರ್ ಆಫ್ ಕಾಮರ್ಸ್

19/09/2025, 22:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿಯನ್ನು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಅಧ್ಯಕ್ಷ ಕೆ ಎಸ್ ನಾಗೇಶ್ ನೇತೃತ್ವದಲ್ಲಿ ನೀಡಲಾಯಿತು.
ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಚೇಂಬರ್ ಪ್ರತಿನಿಧಿಗಳು, ಸ್ಥಳೀಯ ಪಂಚಾಯಿತಿ ಕಟ್ಟಡ ನಿರ್ಮಾಣ ಪರವಾನಗಿ ನೀಡುವಾಗ ಕಾರ್ಮಿಕ ಸೆಸ್ ಪಡೆದಿರುತ್ತಾರೆ. ಕಾರ್ಮಿಕ ಇಲಾಖೆ ಪಂಚಾಯಿತಿಯಿಂದ ಸಂಗ್ರಹಿಸಲಾದ ಸೆಸ್ ಹಣವನ್ನು ಪಡೆಯಬೇಕು. ಅದು ಬಿಟ್ಟು ಮಾಲೀಕರಿಗೆ ನೋಟಿಸ್ ನೀಡಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಇದನ್ನು ತಪ್ಪಿಸಲು ರಾಜ್ಯದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ, ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಇರಲು ಸೂಚಿಸಿದರು. ಪ್ರತಿ 45 ದಿನಗಳಿಗೆ ಒಮ್ಮೆ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಗಬೇಕಿರುವ ಕೆಲಸ ಕಾರ್ಯಗಳ ಚರ್ಚಿಸಿ ಮುನ್ನಡೆಯಲು ಸಲಹೆ ನೀಡಿದರು.
ಮಡಿಕೇರಿ ಶಾಸಕ ಡಾ ಮಂತರ್ ಗೌಡ ಮಾತನಾಡಿ, ಅನವಶ್ಯಕವಾಗಿ ಯಾರಿಗೂ ನೋಟಿಸ್ ಕೊಡುವುದಕ್ಕಿಂತ, ಸರಿಯಾದ ರೀತಿಯಲ್ಲಿ ಪರಿಶೀಲಿಸಿ ಅಗತ್ಯವಿರುವವರಿಂದ ಟ್ಯಾಕ್ಸ್ ಸಂಗ್ರಹ ಮಾಡಿ. ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳನ್ನು ಪರಿಶೀಲಿಸಿ ಟ್ಯಾಕ್ಸ್ ಸಂಗ್ರಹ ಮಾಡಲು ಯಾರಿಂದಲೂ ವಿರೋಧವಿರುವುದಿಲ್ಲ ಎಂದು ತಿಳಿಸಿದರು.
ಸಚಿವರು ಶಾಸಕರ ಮಾತಿಗೆ ಸಹಮತ ವ್ಯಕ್ತಪಡಿಸಿದರು.
ಸಭೆಯಲ್ಲಿ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಖಜಾಂಚಿ ಎನ್.ವಿ.ಬಾಬು, ಉಪಾಧ್ಯಕ್ಷ ರಂಗಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಅಂಬೇಕಲ್ ನವೀನ್, ಸೋಮವಾರಪೇಟೆ ಅಧ್ಯಕ್ಷ ಧನು ಕುಮಾರ್ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು