ಇತ್ತೀಚಿನ ಸುದ್ದಿ
ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣ: ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ
20/09/2025, 15:32

ಮಂಗಳೂರು(reporterkarnataka.com): ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 100/2024 ಕಲಂ 126(2),309(5),309(6)BNS ಪ್ರಕರಣದಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು, ಇದರ ವಿಚಾರಣೆ ನಡೆಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಂದೇಶ್ ಅವರು ಆರೋಪಿಯ ಮೇಲೆ ಆರೋಪ ಸಾಬೀತಾಗಿದೆ ಎಂದು ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5000 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿರುತ್ತಾರೆ. ಸರ್ಕಾರದ ಪರ ಸಹಾಯಕ ಸಹಕಾರಿ ಅಭಿಯೋಜಕರಾಗಿ ಆಶಿತಾ ಅವರು ವಾದಿಸಿದ್ದರು.