5:52 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

21/09/2025, 13:16

ಚಿಕ್ಕಬಳ್ಳಾಪುರ(reporter Karnataka.com) ಮಾಹಿತಿ ಹಕ್ಕು ಕಾಯ್ದೆಯಡಿಯ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ತ್ವರಿತವಾಗಿ ವಿಲೆವಾರಿ ಮಾಡಿ ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಮಟ್ಟದಲ್ಲಿಯೇ ಅದಾಲತ್ ನಡೆಸುವ ಚಿಂತನೆಯನ್ನು ಆಯೋಗ ಹೊಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಹೇಳಿದರು.
ಅವರು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ 7 ತಿಂಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ ಸುಮಾರು 54 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೆವಾರಿಗೆ ಬಾಕಿ ಇದ್ದವು. ಈ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಹಲವು ಯುಕ್ತ ಕ್ರಮಗಳನ್ನು ಆಯೋಗ ತೆಗೆದುಕೊಂಡು 12,896 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ. ಪ್ರಸ್ತುತ 41,104ಕ್ಕೆ ಮಾಹಿತಿ ಹಕ್ಕು ಅರ್ಜಿಗಳನ್ನು ಇಳಿಸಲಾಗಿದೆ. ಈ 41,104 ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುವ ಉದ್ದೇಶದಿಂದ ಮಾಹಿತಿ ಆಯುಕ್ತರೇ ಜಿಲ್ಲಾ ಮಟ್ಟಕ್ಕೆ ಆಗಮಿಸಿ ಅದಾಲತ್ ತೆಗೆದುಕೊಂಡು ಸ್ಥಳದಲ್ಲೆ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಕಾರ್ಯ ಮುಂದಿನ ಕನ್ನಡ ರಾಜ್ಯೋತ್ಸವದ ವೇಳೆಗೆ ಆರಂಭವಾಗಬಹುದು ಎಂದು ಭರವಸೆ ನೀಡಿದರು.
ಪ್ರಸ್ತುತ ರಾಜ್ಯದಲ್ಲಿ ಪ್ರತಿ ತಿಂಗಳು ಸರಾಸರಿ 1500 ಮಾಹಿತಿ ಹಕ್ಕು ಅರ್ಜಿಗಳು ಆಯೋಗಕ್ಕೆ ಸ್ವೀಕಾರವಾಗುತ್ತಿವೆ. ಈ ಅರ್ಜಿಗಳನ್ನು ಸಹ ಕಾಲೋಚಿತವಾಗಿ ಇತ್ಯರ್ಥ ಪಡಿಸುವ ಜೊತೆ ಜೊತೆಗೆ ಪ್ರಸ್ತುತ ಬಾಕಿ ಇರುವ 41,104 ಅರ್ಜಿಗಳನ್ನು ವಿಲೇವಾರಿ ಮಾಡಿ ಶೂನ್ಯಕ್ಕಿಳಿಸುವ ಮೂಲಕ ಆಡಳಿತದಲ್ಲಿ ಹೆಚ್ಚು ಪಾರದರ್ಶಕತೆ ತರಲು ಆಯೋಗ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ 2005ರಲ್ಲಿ ಮಾಹಿತಿ ಹಕ್ಕು ಕಾಯ್ದೆಯು ಜಾರಿಗೆ ಬಂದಿರುವುದು ಭ್ರಷ್ಟಾಚಾರ ನಿವಾರಣೆಗೆ ಹೆಚ್ಚು ಸಹಕಾರಿಯಾಗಿದೆ ಎಂದರು.

*10 ಕೋಟಿಗೂ ಹೆಚ್ಚು ದಂಡ:* ರಾಜ್ಯದಲ್ಲಿ ಸರಿಯಾಗಿ ಮಾಹಿತಿ ನೀಡದ 10,699 ಸಾರ್ವಜನಿಕ ಮಾಹಿತಿಹಕ್ಕು ಅಧಿಕಾರಿಗಳಿಗೆ ಈವರೆಗೆ 10,08,46,450 ರೂ ರಷ್ಟು ದಂಡವನ್ನು ಆಯೋಗ ವಿಧಿಸಿದೆ. ಈ ಪೈಕಿ 2119 ಅಧಿಕಾರಿಗಳು 2.45 ಕೋಟಿ ದಂಡ ಪಾವತಿಸಿದ್ದು, ಉಳಿದ ಅಧಿಕಾರಿಗಳು ದಂಡ ಪಾವತಿ ಮಾಡುವಂತೆ ಸೂಚಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ ಎಂದು ರುದ್ರಣ್ಣ ಹರ್ತಿಕೋಟೆ ಅವರು ಮಾಹಿತಿ ನೀಡಿದರು.
ಮಾಹಿತಿ ಆಯುಕ್ತ ರಾಜಶೇಖರ .ಎಸ್. ರವರು ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳ ವಿಲೆವಾರಿ ಉತ್ತಮವಾಗಿದೆ. ಕಳೆದ ಏಪ್ರಿಲ್ ನಿಂದ ಈ ವರೆಗೆ 10,777 ಮಾಹಿತಿ ಹಕ್ಕು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 9,837 ರಷ್ಟು ಅರ್ಜಿಗಳು ವಿಲೆವಾರಿಯಾಗಿ 772 ಅರ್ಜಿಗಳು ಮಾತ್ರ ಬಾಕಿ ಇವೆ. ಜಿಲ್ಲೆಯಲ್ಲಿ ಸ್ವೀಕಾರಗೊಂಡಿರುವ ಮಾಹಿತಿ ಅರ್ಜಿಗಳ ಪೈಕಿ ಪಂಚಾಯತ್ ರಾಜ್ ಇಲಾಖೆಯಡಿ 368, ಕಂದಾಯ ಇಲಾಖೆಯಡಿ 212, ಸಮಾಜ ಕಲ್ಯಾಣ ಇಲಾಖೆಯಡಿ 33, ನಾಗರಾಭಿವೃದ್ಧಿ ಇಲಾಖೆಯಡಿ 31, ಜಲ ಸಂಪನ್ಮೂಲ ಇಲಾಖೆಯಡಿ 21, ಕೃಷಿ ಇಲಾಖೆಯ 19, ಅರಣ್ಯ ಇಲಾಖೆಯಡಿ 18, ಲೋಕೋಪಯೋಗಿ ಇಲಾಖೆಯಡಿ 17 ಅರ್ಜಿಗಳಿವೆ ಹಾಗೂ ಇತರ ಇಲಾಖೆಗಳಲ್ಲಿ ಪ್ರಕರಣಗಳು ಬಾಕಿ ಇವೆ. ಈ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥ ಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿಯೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಾಗೂ ಕಂದಾಯ ಇಲಾಖೆಯಡಿ ಮಾಹಿತಿ ಹಕ್ಕು ಅರ್ಜಿಗಳು ಅತಿ ಹೆಚ್ಚಾಗಿ ಸ್ವೀಕಾರವಾಗಿವೆ. ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಬೇಕಾದ ಮಾಹಿತಿಗಳನ್ನು ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದದ್ದು.ಸಾರ್ವಜನಿಕರು ಕೇಳಿದ ಸಾರ್ವಜನಿಕ ಹಿತಾಸಕ್ತಿಯುಳ್ಳ ಮಾಹಿತಿಯನ್ನು ನೀಡಲು ಅಧಿಕಾರಿಗಳು ನಿರಾಕರಿಸಿದರೆ ಅಥವಾ ಅಲಕ್ಷ್ಯ ವಹಿಸಿದರೆ ಆಯೋಗ ದಂಡ ವಿಧಿಸಲಿದೆ.ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಿಯಾಗಿ ಮಾಹಿತಿ ನೀಡದ 287 ಅಧಿಕಾರಿಗಳಿಗೆ 28,70,000 ರೂ ದಂಡ ವಿಧಿಸಲಾಗಿದ್ದು ಈ ಪೈಕಿ 69 ಅಧಿಕಾರಿಗಳು 6,90,000 ರೂ. ದಂಡ ಪಾವತಿಸಿದ್ದಾರೆ ಎಂದು ಮಾಹಿತಿ ಆಯುಕ್ತರಾದ ರಾಜಶೇಖರ .ಎಸ್. ರವರು ಹೇಳಿದರು.
ಪತ್ರಿಕಾಗೋಷ್ಠಿಗೂ ಮುನ್ನ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಪ್ರಥಮ ಮಾಹಿತಿ ಹಕ್ಕು ಅಧಿಕಾರಿ ಮತ್ತು ಮೇಲ್ಮನವಿ ಮಾಹಿತಿ ಹಕ್ಕು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಸ್ವಿಕಾರವಾಗುವ ಅರ್ಜಿಗಳ ವಿಲೆವಾರಿ ಮಾಡುವ ಪ್ರಕ್ರಿಯೆಯನ್ನು ನಿದರ್ಶನಗಳ ಸಹಿತವಾಗಿ ವಿವರಿಸಲಾಯಿತು. ಮಾಹಿತಿ ಹಕ್ಕು ಅರ್ಜಿಗಳನ್ನು ಯಾವ ರೀತಿ ವಿಲೆವಾರಿ ಮಾಡಬೇಕು. ಮಾಡದೆ ಇದ್ದರೆ ಸೇವಾ ಅವಧಿಯಲ್ಲಿ ಆಗುವ ತೊಂದರೆಗಳೇನು, ಪಿಂಚಣಿಯ ಮೇಲೆ ಆಗುವ ಪರಿಣಾಮಗಳೇನು, ದಂಡ ಹೇಗೆ ಬೀಳುತ್ತದೆ ಎಂದು ತಿಳಿಸಿಕೊಟ್ಟು ಆಯೋಗದ ವೆಬ್ ಸೈಟ್ ನಲ್ಲಿರುವ ಮಾಹಿತಿ ಹಕ್ಕು ಕಾಯ್ದೆಯ ಕುರಿತ ಮಾಹಿತಿಯನ್ನು ಡೌನ್ ಲೋಡ್ ಮಾಡಿಕೊಂಡು ಅಧ್ಯಯನ ಮಾಡುವಂತೆ ಹಾಗೂ ಅರ್ಜಿದಾರರಿಗೆ ಮಾಹಿತಿಯನ್ನು ಸಕಾಲಕ್ಕೆ ನಿಯಮಾವಳಿ ರೀತ್ಯ ನೀಡುವ ಮೂಲಕ ಜನಪರ ಆಡಳಿತ ನೀಡಲು ಆಡಳಿತ ವರ್ಗ ಮುಂದಾಗುವಂತೆ ಮಾಹಿತಿ ಆಯುಕ್ತರು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್ ಅಶ್ವಿನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು