ಇತ್ತೀಚಿನ ಸುದ್ದಿ
ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ: ನಾಡ ದೇವತೆ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ
22/09/2025, 14:09

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com
ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೊಂಡಿದೆ. ನಾಡ ದೇವತೆ ಚಾಮುಂಡಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಮೈಸೂರು ರೇಷ್ಮೆ ಸೀರೆ ಉಟ್ಟು, ಮೈಸೂರು ಮಲ್ಲಿಗೆ ಮುಡಿದು ಚಾಲನೆ ನೀಡಿದರು.
ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ನಾಡದೇವತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಲೇಖಕಿ ಬಾನು ಮುಷ್ತಾಕ್ ಮಂಗಳಾರತಿ ಪಡೆದರು. ದೇವಿ ದರ್ಶನದ ವೇಳೆ ಬಾನು ಮುಷ್ತಾಕ್ ರಿಗೆ ಜಿಲ್ಲಾಡಳಿತ ದಿಂದ ಹೂವಿನ ಹಾರ, ಸೀರೆಯನ್ನು ಬಾನು ಮುಷ್ತಾಕ್ ಅವರಿಗೆ ಉಡುಗೊರೆಯಾಗಿ ನೀಡಲಾಯಿತು. ಚಾಮುಂಡಿ ಬೆಟ್ಟಕ್ಕೆ ಬಾನು ಮುಸ್ತಾಕ್ ಕುಟುಂಬ ಸಮೇತ ಆಗಮಿಸಿದ್ದರು.