9:51 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ‘ಕರುಣೆಯ ತೊಟ್ಟಿಲು’

22/09/2025, 14:29

ಮಂಗಳೂರು(reporterkarnataka.com): ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಎಂ ಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್‌ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು ಟ್ರಸ್ಟಿಗಳ ಸಹಾಯದಿಂದ ನಡೆಯುವ ‘ಕಾರುಣ್ಯ ಯೋಜನೆ’ಯನ್ನು ನ.1ರಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೂ ವಿಸ್ತರಿಸಲಾಗುತ್ತಿದೆ ಎಂದರು.
ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸ ಕಲ್ಪನೆಯಾಗಿ ಕ್ಲೋತ್ ಬ್ಯಾಂಕ್ ಆರಂಭಿಸಲಾಗಿದೆ. ಸಾರ್ವಜನಿಕರು ಹೊಸದಾಗಿ ಖರೀದಿಸಿದ ಅಥವಾ ಬಳಕೆ ಮಾಡಿದ ಶುಭ್ರ ಬಟ್ಟೆಗಳನ್ನು ಇಲ್ಲಿ ತಂದು ಇಡಬಹುದು. ಇದನ್ನು ಅಗತ್ಯವಿರುವ ರೋಗಿಗಳು ಅಥವಾ ಅವರ ಜತೆಗಾರರು ಕೊಂಡೊಯ್ಯಲಿದ್ದಾರೆ ಎಂದು ಅವರು ಹೇಳಿದರು.
ಎಂ ಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ ಮಾತನಾಡಿ, ವೆನ್ಲಾಕ್ ಆಸ್ಪತ್ರೆಯ ಡಿಎಂಒ ಅವರ ಮನವಿ ಮೇರೆಗೆ ಕ್ಲೋತ್ ಬ್ಯಾಂಕ್ ಆರಂಭಿಸಿದ್ದು, ಅದರ ಖರ್ಚು ವೆಚ್ಚವನ್ನು ನಮ್ಮ ಟ್ರಸ್ಟಿ ಶರೀಫ್ ವೈಟ್‌ಸ್ಟೋನ್ ಭರಿಸಿದ್ದಾರೆ. ಜನರು ಉತ್ತಮ ದರ್ಜೆಯ ಬಟ್ಟೆ ತಂದು ಕೊಟ್ಟು ಸಹಕರಿಸಬೇಕು. ಇಲ್ಲಿಯ ಸಿಬ್ಬಂದಿ ಅಗತ್ಯವಿರುವವರಿಗೆ ವಿತರಿಸಲಿಸಲಿದ್ದಾರೆ ಎಂದು ಅವರು ನುಡಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆನ್‌ಲಾಕ್ ಆಸ್ಪತ್ರೆ ಅಧೀಕ್ಷಕ ಡಾ.ಡಿ.ಎಸ್. ಶಿವಪ್ರಕಾಶ್, ಆರ್‌ಎಂಒ ಡಾ.ಸುಧಾಕರ್, ಕೆಎಂಸಿ ಆಸ್ಪತ್ರೆ ಡೀನ್ ಡಾ.ಉನ್ನಿಕೃಷ್ಣನ್, ಜಿಪಂ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ., ಮಾಜಿ ಕಾರ್ಪೊರೇಟರ್ ಎ.ಸಿ.ವಿನಯರಾಜ್, ಎಂ ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಟ್ರಸ್ಟಿಗಳಾದ ಮೊಹಮ್ಮದ್ ಹನೀಫ್ ಗೋಳ್ತಮಜಲು, ಅಬೂಬಕರ್ ಕೆ., ಅಬೂಬಕರ್ ಪುತ್ತು, ಅನ್ವರ್ ಹುಸೇನ್, ಇಬ್ರಾಹಿಂ ಮೊಯ್ದಿನಬ್ಬ ನಂದಾವರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಸಲೀಂ ಮಕ್ಕಾ, ಡಿ.ಎಂ.ರಶೀದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು