8:48 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ನಾಲ್ಕನೇ ವರ್ಷದ ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ

22/09/2025, 20:09

ಮಂಗಳೂರು(reporterkarnataka.com):ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ನಡೆಯಿತು.


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಸಪ್ಟೆಂಬರ್ 30ರ ಮಂಗಳವಾರದಂದು ನಡೆಯಲಿರುವ ನಾಲ್ಕನೇ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು