4:31 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

22/09/2025, 22:25

ಮೈಸೂರು(reporterkarnataka.com): ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

*ವಿನೇಶ್ ಫೋಗಟ್ ಅವರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು:*
ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ
ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

*ಕ್ರೀಡಾಪಟುಗಳಿಗೆ ಸರ್ಕಾರದ ನೆರವು:*
ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ ಎಂದು ಅವರು ನುಡಿದರು.

*ಸದೃಢ ಆರೋಗ್ಯಕ್ಕೆ ಕ್ರೀಡೆ-ವ್ಯಾಯಾಮ:*
ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು