ಇತ್ತೀಚಿನ ಸುದ್ದಿ
Mangaluru | ದಕ್ಷಿಣ ಕನ್ನಡ ಜಿಲ್ಲೆಯಿಂದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಗಡಿಪಾರು
23/09/2025, 18:44

ಪುತ್ತೂರು(reporterkarnataka.com): ಸೌಜನ್ಯ ಪರ ಹೋರಾಟಗಾರ ಹಾಗೂ
ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಮಾಡಿದ್ದಾರೆ.
ತಿಮರೋಡಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.