1:06 AM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Mangaluru | 30ರಂದು ಕುಡ್ಲದ ಪಿಲಿಪರ್ಬ- 4ನೇ ಆವೃತ್ತಿ: ಶಾಸಕ ವೇದವ್ಯಾಸ ಶಾಸಕ ಕಾಮತ್

26/09/2025, 13:47

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಸೆ.30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದ್ದು, 10 ತಂಡಗಳು ಭಾಗವಹಿಸಲಿವೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು.

ಅವರು ಇಂದು ನಗರದ ಖಾಸಗಿ ಹೊಟೇಲ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 10 ಗಂಟೆಗೆ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟ ನಡೆಯಲಿದೆ. ಇಲ್ಲಿ ಭಾಗವಹಿಸುವ ಪ್ರತಿ ತಂಡವೂ ವೈಭವದ ಮೆರವಣಿಗೆಯ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, ಪ್ರತಿ ತಂಡವೂ 20 ನಿಮಿಷಗಳ ಕಾಲ ಪ್ರದರ್ಶನ ನೀಡಲಿವೆ. ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು, ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿವೆ ಎಂದರು.
ಸ್ಪರ್ಧಾಕೂಟದಲ್ಲಿ 6 ತೀರ್ಪುಗಾರರು ಇರಲಿದ್ದು, ನಾಲ್ಕು ಮಂದಿ ವೇದಿಕೆಯಲ್ಲಿ ಮತ್ತು ಇಬ್ಬರು ವಿಡಿಯೋ ವೀಕ್ಷಿಸುತ್ತಾ ಥರ್ಡ್ ಅಂಪಾಯರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಹುಲಿವೇಷ ತಂಡ ವೇದಿಕೆಗೆ ಆಗಮಿಸಿ, ಪ್ರದರ್ಶನ ನೀಡಿ ನಿರ್ಗಮಿಸುವವರೆಗಿನ ಎಲ್ಲವನ್ನೂ ವಿಡಿಯೋ ದಾಖಲಿಸಿ, ಅಗತ್ಯ ಬಿದ್ದರೆ ರೀಪ್ಲೇ ವೀಕ್ಷಿಸಿ ಬಳಿಕವೇ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ ಗೌರವಿಸಲಾಗುವುದು. ಅಲ್ಲದೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಪರ್ಬದ ಪಿಲಿ, ಕಪ್ಪು ಪಿಲಿ, ಮರಿ ಹುಲಿ, ಮುಡಿ, ಶಾಸೆ, ಬಣ್ಣಗಾರಿಕೆ, ಧರಣಿ ಮಂಡಲ ವಿಭಾಗಗಳಿಗೆ ಪ್ರತ್ಯೇಕ ಬಹುಮಾನ ನೀಡಿ, ಪ್ರತಿ ಹುಲಿವೇಷ ತಂಡಕ್ಕೆ ಗೌರವ ಮೊತ್ತ ನೀಡಲಾಗುವುದು ಎಂದರು.
ಪ್ರಥಮ ತಂಡಕ್ಕೆ 5 ಲಕ್ಷ ರೂ., ದ್ವಿತೀಯ ತಂಡಕ್ಕೆ 3 ಲಕ್ಷ ರೂ., ತೃತೀಯ ತಂಡಕ್ಕೆ 2 ಲಕ್ಷ ರೂ. ಹಾಗೂ ವೈಯಕ್ತಿಕವಾಗಿ 25 ಸಾವಿರ ರೂ. ಮತ್ತು ಭಾಗವಹಿಸಿದ ಎಲ್ಲಾ ತಂಡಗಳಿಗೆ 50 ಸಾವಿರ ರೂ. ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ತಾರೆಯರು ಹಾಗೂ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. 5 ಸಾವಿರ ಜನರಿಗೆ ಕುಳಿತುಕೊಳ್ಳಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು, ಗಣ್ಯ ವ್ಯಕ್ತಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ 10 ಸಾವಿರ ಜನರು ಕೂರುವ ವ್ಯವಸ್ಥೆ ಕಲ್ಪಿಸಲಾಗಿದೆ. 40 ಸಾವಿರ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಸ್ಪರ್ಧೆಯಲ್ಲಿ ಟೀಮ್ ಪರಶುರಾಮ, ಪಾಂಡೇಶ್ವರ ಶಾರದಾ ಹುಲಿ, ಶಿವಶಕ್ತಿ ಟೈಗರ್ಸ್ ಮಂಜೇಶ್ವರ, ಲೆಜೆಂಡ್ ಟೈಗರ್ಸ್ ಕುಡ್ಲ, ಕಾರ್ಕಳ ಟೈಗರ್ಸ್, ಟೀಮ್ ಅಗಸ್ತ್ಯ, ಟ್ಯಾಲೆಂಟ್ ಟೈಗರ್ಸ್, ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ, ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂಎಫ್‌ಸಿ), ಹಾಗೂ ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡ ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಯತೀಶ್ ಬೈಕಂಪಾಡಿ, ಕಿರಣ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಚೇತನ್ ಕಾಮತ್, ಸಹಾನ್ ಕೋಡಿಕೆರೆ, ಕಿರಣ್ ಶೆಣೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು