ಇತ್ತೀಚಿನ ಸುದ್ದಿ
ಬಿಕ್ಲು ಶಿವ ಕೊಲೆ ಪ್ರಕರಣ: ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಭೈರತಿ ಬಸವರಾಜ್ ಟೆಂಪಲ್ ರನ್
26/09/2025, 20:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಬಂಧನದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿದರು.
ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಸವರಾಜ್ ನಂತರ, ಅಲ್ಲಿಂದ ಕೊಟ್ಟಿಗೆಹಾರದ ಸೀತಾರಾಮ ದೇವಾಲಯಕ್ಕೆ ಭೇಟಿ ನೀಡಿದರು.
ರಾಜಕೀಯ ಒತ್ತಡ ಮತ್ತು ಕಾನೂನು ಪ್ರಕ್ರಿಯೆಗಳು ಸಾಗುತ್ತಿರುವ ನಡುವೆಯೇ ದೇವರ ದರ್ಶನದಲ್ಲಿ ನಿರತರಾದ ಬಸವರಾಜ್ ಅವರ ಈ ಪ್ರಯಾಣವು ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ.