2:46 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಕಾವೇರಿ ಆರತಿ | ಕೆಆರ್ ಎಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ; ಗೋಧೂಳಿ ಸಮಯದಲ್ಲಿ ಬೆಳಗಿದ ಸಾವಿರಾರು ದೀಪ

27/09/2025, 16:08

ಮಂಡ್ಯ(reporterkarnataka.com): ಕನ್ನಡ ನಾಡಿನ ಜೀವನದಿ, ಧಾರ್ಮಿಕ, ಸಾಂಸ್ಕೃತಿಯ ಪ್ರತೀಕವಾಗಿರುವ ಕಾವೇರಿ ನದಿಗೆ ಪ್ರಪ್ರಥಮ ಬಾರಿಗೆ “ಕಾವೇರಿ ಆರತಿ” ಮಾಡುವ ಮೂಲಕ ರಾಜ್ಯದಲ್ಲಿ ಹೊಸ ಸಂಪ್ರದಾಯಕ್ಕೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮುನ್ನುಡಿ ಬರೆದರು.
ಕಾವೇರಮ್ಮನ ಒಡಲು ಸದಾ ತುಂಬಿರಬೇಕು. ಕೆಆರ್ ಎಸ್ ವರ್ಷ ಪೂರ್ತಿ ಭರ್ತಿಯಾಗಿರಬೇಕು. ನಾಡು ಸುಖ, ಶಾಂತಿ ಸಮೃದ್ಧಿಯಿಂದ ಕೂಡಿರಲೆಂದು ಡಿ.ಕೆ.ಶಿವಕುಮಾರ್ ಅವರು ಕಾವೇರಿ ಮಾತೆಗೆ ಆರತಿಯ ಜ್ಯೋತಿ ಬೆಳಗಿಸಿ ಹೊಸ ಇತಿಹಾಸ ಸೃಷ್ಟಿಸಿದರು. ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಯಿತು.


ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಗೋಧೂಳಿ ಮುಹೂರ್ತದಲ್ಲಿ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡಿ, ತಾಯಿ ಕಾವೇರಿಗೆ ಆರತಿ ಬೆಳಗಿ ನಾಡಿನ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಿದರು.
ದಕ್ಷಿಣ ಭಾರತದ ಇತಿಹಾಸದಲ್ಲೇ ಪ್ರಪ್ರಥಮವಾಗಿ ಕಾವೇರಿ ಆರತಿಯನ್ನು ಸಾಂಕೇತಿಕವಾಗಿ ನೆರವೇರಿಸಲಾಯಿತು. ಶಂಖನಾದ, ಡೋಳು, ನಗಾರಿ ಸದ್ದಿನೊಂದಿಗೆ, ವೇದ ಮಂತ್ರಗಳ ಪಠಣದೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ನೆರವೇರಿದ ಕಾವೇರಿ ಆರತಿ ನೆರದಿದ್ದವರನ್ನು ಮೂಕವಿಸ್ಮತರನ್ನಾಗಿಸಿತು. ಒಂದು ಕ್ಷಣ ಪ್ರವಾಸಿಗರಿಗೆ ಕಾಶಿಯೇ ಕಣ್ಣ ಮುಂದೆ ಹಾದುಹೋದಂತಹ ಅನುಭವ.
ಕರ್ನಾಟಕದಿಂದ ಮಾತ್ರವಲ್ಲದೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಹೊರರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಪ್ರವಾಸಿಗರು ಕಾವೇರಿ ಆರತಿಯನ್ನು ಕಣ್ತುಂಬಿಕೊಂಡರು. ಸೆ.26ರಿಂದ ಅಕ್ಟೋಬರ್ 2ರವರೆಗೆ ಪ್ರತಿ ಸಂಜೆ ನೆರವೇರಲಿರುವ ಕಾವೇರಿ ಆರತಿ ಮೈಸೂರು ದಸರಾಗೆ ಹೊಸ ಮೆರುಗನ್ನು ತಂದುಕೊಟ್ಟಿತು.

*ಕಾವೇರಿ ಪ್ರಾರ್ಥನೆ, ತೀರ್ಥ ಪೂಜೆ, ಚಾಮರ ಸೇವೆ:*
ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಸಂಪ್ರದಾಯ ಬದ್ಧವಾಗಿ ನೆರವೇರಿತು.‌ 13 ಜನರನ್ನೊಳಗೊಂಡ ವೈದಿಕರ ತಂಡ ಹಾಗೂ ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿದ್ದರು.
ಮೊದಲು “ವಾತಾಪಿ ಗಣಪತಿಂ ಭಜೆ” ಮಂಗಳವಾದ್ಯದಿಂದ ಪೂಜೆ ಪ್ರಾರಂಭವಾಯಿತು. ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ, ಸಂಕಲ್ಪ ಮಾಡಲಾಯಿತು.‌ ಕಾವೇರಿ ಸ್ತೊತ್ರದ ಮೂಲಕ ತೀರ್ಥ ಪೂಜೆ ಮಾಡಿ ಬಾಗಿನ ಅರ್ಪಣೆ ಮಾಡಲಾಯಿತು.
ಬ್ರಹ್ಮ, ವಿಷ್ಣು, ಮಹೇಶ್ವರರ ಪ್ರಾರ್ಥನೆ, ಚಾಮರ ಸೇವೆ. ಮೂರು ದಿಕ್ಕಿಗೂ ಶಂಖನಾದ, ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ ಮಾಡಲಾಯಿತು. ಕೊನೆಯಲ್ಲಿ ಕುಂಭಾರತಿ, ನಾಗಾರತಿ, ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನಗೊಂಡಿತು.

*ಲಾಡು ವಿತರಣೆ:*
ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರಿಗೆ ಉಚಿತವಾಗಿ ಲಾಡು ವಿತರಣೆ ಮಾಡಲಾಯಿತು. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದರು. ಪ್ರತಿನಿತ್ಯ ಪ್ರವಾಸಿಗರಿಗೆ ಲಾಡು ವಿತರಣೆ ಮಾಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು