ಇತ್ತೀಚಿನ ಸುದ್ದಿ
ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ: ಕಾರು ನಿಲ್ಲಿಸಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ
27/09/2025, 20:03

ಬೆಂಗಳೂರು(reporter Karnataka.com): ಮಾರ್ಗ ಮಧ್ಯದಲ್ಲಿ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು.
ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.
ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.