3:13 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಾಡಹಬ್ಬ ಮೈಸೂರು ದಸರಾ: ಚಿನ್ನದ ಅಂಬಾರಿಯಲ್ಲಿ ಚಾಮುಂಡಿ ತಾಯಿ ಜಂಬೂ ಸವಾರಿಗೆ ಕ್ಷಣಗಣನೆ

02/10/2025, 09:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಚಿನ್ನದ ಅಂಬಾರಿಯಲ್ಲಿ ನಾಡಿನ ಆದಿ ದೇವತೆ ಚಾಮುಂಡೇಶ್ವರಿ ದೇವಿ ಯನ್ನು ಹೊತ್ತು ಸಾಗುವ ಜಂಬೂ ಸವಾರಿಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ.
ಈ ಬಾರಿಯ ವಿಜಯದಶಮಿ ಜಂಬೂಸವಾರಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆ, ಅಶ್ವಾರೋಹಿದಳ ಭಾಗಿಯಾಗಲಿವೆ.ಅಂಬಾರಿ ಆನೆ ಅಭಿಮನ್ಯುವಿಗೆ ಎಡಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ, ರೂಪ ಸಾಥ್ ನೀಡಲಿದೆ.ನಿಶಾನೆ ಆನೆಯಾಗಿ ಧನಂಜಯ, ನೌಫತ್ ಆನೆಯಾಗಿ ಗೋಪಿ ಭಾಗಿಯಾಗಲಿದೆ. ಸಾಲಾನೆಗಳಾಗಿ ಮಹೇಂದ್ರ, ಶ್ರೀಕಂಠ, ಲಕ್ಷ್ಮಿ, ಕಂಜನ್, ಭೀಮ, ಏಕಲವ್ಯ, ಪ್ರಶಾಂತ, ಸುಗ್ರಿವ, ಹೇಮಾವತಿ ಆನೆಗಳು ಜಂಬೂಸವಾರಿ ಮೆರವಣಿಗೆಯ ಭಾಗಿಯಾಗಲಿದೆ, ಅಂಬಾರಿ ಹೊತ್ತು ಸಾಗಲಿರುವ ಪೊಲೀಸ್ ವಾದ್ಯವೃಂದ, ಪೊಲೀಸ್ ಇಲಾಖೆಯ ತುಕಡಿ, ಅರಣ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಪಂಚಾಯಿತಿಗಳಿಂದ ಸ್ತಬ್ದ ಚಿತ್ರಗಳು, ಕಲಾ ತಂಡಗಳು ಅರಮನೆ ಅವರದಿಂದ ಹೊರಟು, ಬನ್ನಿಮಂಟಪ ದವರೆಗೆ ಮೆರವಣಿಗೆ ಸಾಗಲಿದೆ.
ಬನ್ನಿಮಂಟಪ ಕಾವಾಯತ್ತು ಮೈದಾನದಲ್ಲಿ ಡ್ರೋನ್ ಪ್ರದರ್ಶನ, ಪಂಜಿನ ಪೆರೇಡ್ ನಡೆಯಲಿದ್ದು, ಈಗಾಗಲೇ ಸಾರ್ವಜನಿಕರ ಮನಗೆದ್ದಿರುವ ಡ್ರೋನ್ ಹಾರಾಟ ಗಿನ್ನಿಸ್ ರೆಕಾರ್ಡ್ ಗೆ ಪಾತ್ರವಾಗಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಈ ಪ್ರದರ್ಶನ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.
ಸಾವಿರಾರು ಮೈದಾನದಲ್ಲಿ ‌3000 ಡ್ರೋನ್ ಗಳು ಆಗಸದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು