6:40 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವಕ್ಕೆ ಡಿಸಿಎಂ ಡಿಕೆಶಿ ಫಿದಾ: ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದ ಶಿವಕುಮಾರ್

02/10/2025, 14:07

ಮಂಗಳೂರು (reportetkarnataka.com):ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು.



ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು ನವದುರ್ಗೆಯರಿಗೆ ವಂದಿಸಿದರು. ಶಾರದೆಯ ಸನ್ನಿಧಿಯಲ್ಲಿ ಉಪಮುಖ್ಯಮಂತ್ರಿಗಳಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.
ಬಳಿಕ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಸಾಕ್ಷಾತ್ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು.
ದೇವಸ್ಥಾನದ ಅಧ್ಯಕ್ಷರಾದ ಜೈರಾಜ್ ಎಚ್.ಸೋಮಸುಂದರಂ ಮಾಲಾರ್ಪಣೆಗೈದು ಸ್ವಾಗತಿಸಿದರು. ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಹರೀಶ್ ಕುಮಾರ್ (ಮೆಸ್ಕಾಂ ಅಧ್ಯಕ್ಷರು), ಪಿ.ಕೆ.ಗೌರವಿ, ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು, ಶಾಸಕರಾದ ಅಶೋಕ್ ಕುಮಾರ್ ರೈ, ಎಂ.ಎಲ್. ಸಿ. ಮಂಜುನಾಥ ಭಂಡಾರಿ, ರಕ್ಷಿತ್ ಶಿವರಾಂ ಬೆಳ್ತಂಗಡಿ, ಇನಾಯತ್ ಆಲಿ, ಶ್ರೀನಿವಾಸ್ ಬಿ.ವಿ., ದೇವಳದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು