3:33 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಮೈಸೂರು ದಸರಾ ಜಂಬೂ ಸವಾರಿ: ಸಿಎಂ, ಡಿಸಿಎಂ, ಯದುವೀರ್ ರಿಂದ ತಾಯಿ ಚಾಮುಂಡಿಗೆ ಪುಷ್ಪ ನಮನ

02/10/2025, 19:40

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ೭೫೦ ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿನ ಗಾಂಭೀರ್ಯದ ನಡಿಗೆ, ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಂಡು ಪುನೀತರಾದರು.


ಗಾಂಧಿ ಜಯಂತಿ ದಿನದಂದೇ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಂಸ್ಕೃತಿ, ಸೌಹಾರ್ದ, ಸರ್ಕಾರದ ಸಾಧನೆ ಹಾಗೂ ಗಾಂಧೀಜಿಯ ಆದರ್ಶಗಳನ್ನು ಸ್ತಬ್ಧಚಿತ್ರಗಳ ಮೂಲಕ ಸಾರಿತು.ಪಟ್ಟದ ಆನೆಯಾಗಿ ಅಭಿಮನ್ಯು ಆರನೇ ಬಾರಿ ಯಶಸ್ವಿಯಾಗಿ ಅಂಬಾರಿ ಹೊರುವ ಮೂಲಕ ಗಾಂಭೀರ್ಯದ ಹೆಜ್ಜೆ ಹಾಕಿದ. ಅಭಿಮನ್ಯುವಿಗೆ ರೂಪ ಹಾಗೂ ಕಾವೇರಿ ಆನೆಗಳು ಕುಮ್ಕಿ ಆನೆಗಳಾಗಿ ಸಹಕರಿಸಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಜವಂಶಸ್ತ ಯದುವೀರ್‌ ಶ್ರೀಕಂಠದತ್ತ ಒಡೆಯರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹಾದೇವಪ್ಪ ಸೇರಿದ ಹಲವು ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.

*58 ಸ್ತಬ್ಧಚಿತ್ರಗಳ ವಿಶೇಷತೆ:*
ದಸರಾ ಮೆರವಣಿಗೆಯಲ್ಲಿ ಒಟ್ಟು 58 ಸ್ತಬ್ಧಚಿತ್ರಗಳು ಪಾಲ್ಗೊಂಡವು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ವಿವಿಧ ಯೋಜನೆಗಳ ಮಾಹಿತಿ ಒದಗಿಸಿದವು. ವಿಶೇಷವಾಗಿ ʼಶಕ್ತಿ ಯೋಜನೆʼ ಸ್ತಬ್ಧಚಿತ್ರವು ಎಲ್ಲರ ಗಮನ ಸೆಳೆಯಿತು. ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸುವ ಈ ಯೋಜನೆಯಿಂದ ಸಮಾಜದಲ್ಲಿ ಆಗಿರುವ ಸಕಾರಾತ್ಮಕ ಬದಲಾವಣೆಗಳನ್ನು ಪ್ರತಿಬಿಂಬಿಸಿತು.

*ಮೆರವಣಿಗೆಗೆ ಸಿಎಂ ಚಾಲನೆ:*
ದಸರಾ ಮೆರವಣಿಗೆ ಆರಂಭದಲ್ಲಿ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 1.08ಕ್ಕೆ ಪೂಜೆ ನೆರವೇರಿಸಿದರು. ಮೆರವಣಿಗೆಗೆ ಚಾಲನೆ ದೊರೆಯುತ್ತಿದ್ದಂತೆ ಸಾವಿರಾರು ಕಲಾವಿದರು ತಮ್ಮ ಜಿಲ್ಲೆಗಳ ಸಾಂಸ್ಕೃತಿಕ ವೈಶಿಷ್ಟ್ಯತೆಗಳನ್ನು ಪಡಿಮೂಡಿಸಿದರು. ತಾಳ,ಮೇಳ, ಕಂಸಾಳೆ, ತಮಟೆ, ಡೋಲು ಚಂಡೆಗಳ ಮೂಲಕ ಸಾಂಸ್ಕೃತಿಕ ಕಲರವ ಮೆರವಣಿಗೆಗೆ ಮೆರಗು ನೀಡಿತು.
ಜಂಬೂ ಸವಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪಾಸ್‌ ಹೊಂದಿದವರಿಗೆ ಮಾತ್ರ ಜಂಬೂ ಸವಾರಿ ಮೆರವಣಿಗೆ ವೀಕ್ಷಿಸಲು ಅವಕಾಶ ನೀಡಲಾಯಿತು. ಅರಮನೆ ಆವರಣದ ಹೊರಗೆ ಕಟ್ಟಡ ಹಾಗೂ ಮರಗಳನ್ನು ಏರಿ ಜಂಬೂ ಸವಾರಿ ವೀಕ್ಷಣೆಗೆ ಕಡಿವಾಣ ಹಾಕಲಾಗಿತ್ತು.
ಮಳೆ ಸಿಂಚನವು ಮೆರವಣಿಗೆ ಉತ್ಸಾಹ ಕಡಿಮೆ ಮಾಡಲಿಲ್ಲ. ಸುಮಾರು ಎರಡು ಗಂಟೆಗಳ ಕಾಲ ಸಾಗಿದ ಮೆರವಣಿಗೆಯಲ್ಲಿ ಪೊಲೀಸ್ ಪಡೆ, ಅಶ್ವಾರೋಹಿ ಪಡೆ, ವಿವಿಧ ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳು ಜಂಬೂ ಸವಾರಿ ಮೆರವಣಿಗೆಯ ಕಲರವ ಹೆಚ್ಚಿಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು