ಇತ್ತೀಚಿನ ಸುದ್ದಿ
Kodagu | ಮಡಿಕೇರಿ: ಪಿಯು ವಿದ್ಯಾರ್ಥಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ
04/10/2025, 13:03

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ತಾಲ್ಲೂಕು ನಾಪೋಕ್ಲು ಸಮೀಪದ ನೆಲಜಿ ಮತ್ತು ಬಲ್ಲಮಾವಟಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಗೆ ಒಳಪಡುವ ನೆಲಜಿ ಗ್ರಾಮದ ತನು ತಮ್ಮಯ್ಯ ರವರ ಪುತ್ರಿ ಹರ್ಷಿಣಿ (17) ಹಾಗೂ ಬಲ್ಲ ಮಾವಟಿ ಗ್ರಾಮದ ಪ್ರಶಾಂತ್ ಎಂಬುವವರ ಪುತ್ರ ಪ್ರತೀಕ್ ಪೊನ್ನಣ್ಣ (17) ಮೃತಪಟ್ಟ ದುರ್ದೈವಿಗಳು.
ಮೃತರು ಇಬ್ಬರು ಮೂರ್ನಾಡು ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಕಳೆದ ಮಂಗಳವಾರ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಂತಾಜನಕ ಸ್ಥಿತಿಯಲ್ಲಿ ಇದ್ದ ಇಬ್ಬರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವನಿಸಲಾಗಿದ್ದು, ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.