9:14 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

04/10/2025, 18:03

ಬೆಳಗಾವಿ(reporterkarnataka.com): ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

*ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ*
ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದರು.

*ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಲೆಕೆಡಿಸಿಕೊಳ್ಳಬೇಕಿಲ್ಲ,:*
ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು