7:28 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ ಬಂಧನ: ಮುಲ್ಕಿ ಪೊಲೀಸರ ಕಾರ್ಯಾಚರಣೆ

05/10/2025, 14:18

ಮಂಗಳೂರು(reporterkarnataka.com): ಕಲಿ ಯೋಗೀಶ್ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಯೋಗೀಶ್ ನ ಸಹಚರ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಕಲಿ ಯೋಗೀಶ್ ನ ಸಹಚರನಾದ ಮುಲ್ಕಿ ತಾಲೂಕಿನ ಚಿತ್ರಾಪು ಗ್ರಾಮದ ಆರೋಪಿ ಶ್ರೀನಿವಾಸ್ ಅಲಿಯಾಸ್ ಶೀನು(45)ಎಂಬಾತನು ಕಳೆದ 8 ವರ್ಷಗಳಿಂದ ದಸ್ತಗಿರಿ ಗೆ ಸಿಗದೆ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.ಈತನ ವಿರುದ್ದ ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ರವರು ವಾರೆಂಟ್ ಹಾಗೂ ಉದ್ಘೂಷಣೆಯನ್ನು ಹೊರಡಿಸಿತ್ತು. ಈತನ ಪತ್ತೆಯ ಬಗ್ಗೆ ಶ್ರೀಕಾಂತ್ (ಸಹಾಯಕ ಪೊಲೀಸ್ ಅಯುಕ್ತರ) ಅವರ ಮಾರ್ಗದರ್ಶನದಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಬಿ. ಎಸ್. ಪೊಲೀಸ್ ಉಪ ನಿರೀಕ್ಷಕರಾ್ ಉಮೇಶ್ ಕುಮಾರ್ ಎಂ.ಎನ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯ ಅವರ ಒಂದು ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು