9:32 PM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

Mysore | ವಿಶ್ವವಿಖ್ಯಾತ ನಾಡ ಹಬ್ಬ ಮುಗಿಸಿ ತಮ್ಮ ಕ್ಯಾಂಪ್ ಗಳಿಗೆ ಹೊರಟ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಮ್

05/10/2025, 21:12

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಮತ್ತು ಟೀಂ ನಾಡಿನಿಂದ ಕಾಡಿನತ್ತ ಹೊರಟಿದ್ದು, ದಸರಾ ಆನೆಗಳ ಈ ಬೀಳ್ಕೊಡುಗೆಯು ಇಂದು ಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾಯ್ತು.
ಹೌದು, ಕಳೆದ ಒಂದೂವರೆ ತಿಂಗಳಿನಿಂದ ಗಜಪಡೆ ಅರಮನೆ ಆವರಣದಲ್ಲಿ ಬೀಡು ಬಿಟ್ಟಿತ್ತು. ಜಂಬೂ ಸವಾರಿ ಮೆರವಣಿಗೆಯಲ್ಲಿ ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದವು. ಜಂಬೂ ಸವಾರಿ ಮೆರವಣಿಗೆ ಮುಗಿದ ಎರಡು ದಿನಗಳ ಬಳಿಕ ಸ್ವಸ್ಥಾನದತ್ತ ಗಜಪಡೆ ಹೊರಟಿದೆ.


ದಸರಾ ಅಂಗವಾಗಿ ಕಳೆದ 61 ದಿನಗಳಿಂದ ಮೈಸೂರಿನಲ್ಲಿ ಆನೆಗಳು ಬೀಡು ಬಿಟ್ಟಿದ್ದವು. ಇದೀಗ ಇಂದು ವಾಪಸ್ ಕಾಡಿಗೆ ಹೊರಟ್ಟಿದ್ದು, ಈ ಹಿನ್ನಲೆ ಅಭಿಮನ್ಯು ನೇತೃತ್ವದ ಎಲ್ಲಾ 14 ಆನೆಗಳಿಗೆ ವಿಶೇಷ ಪೂಜೆ ನೆರವೇರಿಸಿ ಕುಂಬಳಕಾಯಿ ಹೊಡೆದು ಅರಣ್ಯ ಇಲಾಖೆ ಬೀಳ್ಕೊಡುಗೆ ನೀಡಿದೆ.
ಅರಮನೆ ಅಂಗಳದಲ್ಲಿ ಎಲ್ಲಾ ಆನೆಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ಸಲ್ಲಿಸಿ ಬಳಿಕ ಅವುಗಳಿಗೆ ಪ್ರಿಯವಾದ ಬೆಲ್ಲ, ಕಬ್ಬು, ತೆಂಗು, ಬಾಳೆಹಣ್ಣು ನೀಡಿ ಸತ್ಕಾರ ಮಾಡಲಾಯಿತು. ಅಭಿಮನ್ಯು ನೇತೃತ್ವದ ಗಜಪಡೆಯನ್ನು ಬೀಳ್ಕೊಡಲು ಕಿಕ್ಕಿರಿದು ಜನ ಸೇರಿತ್ತು.
ದಸರಾದಲ್ಲಿ ಭಾಗಿಯಾಗಿದ್ದ ಆನೆಗಳನ್ನು ನೋಡಲು ಪುಟ್ಟ ಪುಟ್ಟ ಮಕ್ಕಳು, ದೊಡ್ಡವರು ಎಲ್ಲರೂ ಕೂಡ ಆನೆಗಳ ಜೊತೆ ಪೋಟೋ, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದು, ಆನೆಗಳ ಜೊತೆ ಮಾವುತರು ಕಾವಾಡಿಗರು ಹಾಗೂ ಕುಟುಂಬ ವರ್ಗ ಆನೆ ಶಿಬಿರಗಳತ್ತ ಪಯಣ ಬೆಳೆಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು