9:46 PM Sunday5 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ವಾಹನಗಳಿಗೆ ಆಶೀರ್ವಾದ ಕಾರ್ಯಕ್ರಮ

05/10/2025, 21:38

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾಹನಗಳನ್ನು ಆಶೀರ್ವಾದಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.
ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರು ಬಲಿಪೂಜೆಯ ಬಳಿಕ ಪವಿತ್ರ ಜಲವನ್ನು ಸಂಪ್ರೋಕ್ಷಣೆ ಮಾಡಿ ವಾಹನಗಳನ್ನು ಆಶೀರ್ವದಿಸುವ ಕಾರ್ಯಕ್ರಮ ನೆರವೇರಿಸಿದರು. ವಾಹನಗಳು ಮತ್ತು ಅದನ್ನು ಚಲಾಯಿಸುವವರು ಹಾಗೂ ವಾಹನಗಳಲ್ಲಿ ಪ್ರಯಾಣಿಸುವವರ ಸುರಕ್ಷತೆಗಾಗಿ ವಿಶೇಷವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಾರ್ಥನಾ ಗೀತೆ ‘ಹಿಸೊಪಾನ್‌ ಮ್ಹಜೆರ್‌, ಉದಾಕ್ ಶಿಂಪ್ಡಾಯ್‌ ಏ ಸೊಮಿಯಾ, ಆನಿ ಹಾಂವ್ ನಿತಳ್ ಜಾತಲೊಂ; ಧುಂ ತು ಮ್ಹಾಕಾ, ಆನಿ ಹಿಮಾ ಪ್ರಾಸ್‌ ಧವೊ ಜಾತಲೊಂ’ ಇದನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ನೂರಕ್ಕೂ ಆಧಿಕ ವಾಹನಗಳನ್ನು ಆಶೀರ್ವಾದ ಮಾಡಲಾಯಿತು.


ಈ ಸಮಾರಂಭದಲ್ಲಿ ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು