ಇತ್ತೀಚಿನ ಸುದ್ದಿ
ಫಾಕ್ಸ್‌ಕಾನ್ ಮುಖ್ಯಸ್ಥ ರಾಬರ್ಟ್ ವೂ ಮುಖ್ಯಮಂತ್ರಿಯ ಭೇಟಿ; ಚರ್ಚೆ
05/10/2025, 21:51
ಬೆಂಗಳೂರು(reporterkarnataka.com): ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಕೂಡ ಇದ್ದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಕೂಡ ಉಪಸ್ಥಿತರಿದ್ದರು.