2:01 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ರಥೋತ್ಸವ: ತ.ನಾ., ಕೇರಳ, ಆಂಧ್ರದಿಂದಲೂ ಭಕ್ತರ ದಂಡು

06/10/2025, 20:48

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಹಾಗೂ ಭಕ್ತಿಯಿಂದ ರಥೋತ್ಸವ ನೆರವೇರಿತು.
ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿದ ನಾಲ್ಕು ದಿನಗಳ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಟುಂಬದವರೊಂದಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಥ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ಪೊಲೀಸ್ ಬ್ಯಾಂಡ್ ಹಾಗೂ ಸಿಡಿಮದ್ದುಗಳನ್ನು ಸಿಡಿಸಲಾಯಿತು.


ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಸೇರಿದಂತೆ ತಮಿಳುನಾಡು, ಕೇರಳ ಆಂಧ್ರಪ್ರದೇಶಗಳಿಂದ ಸಾವಿರಾರು ಭಕ್ತಾದಿಗಳು ರಥೋತ್ಸವಕ್ಕೆ ಸಾಕ್ಷಿಯಾದರು. ಬಳಿಕ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಕಾಲಕ್ಕೆ ಮಳೆ ಬೆಳೆ ಬಂದು ರೈತಾಪಿ ವರ್ಗದ ಜನರು ಉತ್ತಮ ಬೆಳೆ ಬೆಳೆಯಲಿ ಹಾಗೂ ರಾಜ್ಯದ ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದರು.
ರಾಜಮಾತೆ ಪ್ರಮೋದಾ ದೇವಿ ಒಡೆಯರ್, ಪ್ರತಿ ವರ್ಷದಂತೆ ಈ ವರ್ಷವೂ ಸಹ ತಾಯಿ ಚಾಮುಂಡೇಶ್ವರಿಗೆ ರಥೋತ್ಸವದ ಮುಖಾಂತರ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು