7:31 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ, ಕೃಷಿ ಕ್ಷೇತ್ರದ ಸಾಧಕರಿಗೆ ರಚನಾ ಪ್ರಶಸ್ತಿ ಪ್ರದಾನ

06/10/2025, 21:27

ಮಂಗಳೂರು(reporterkarnataka.com): ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್ ಸಭಾಂಗಣದಲ್ಲಿ ನೆರವೇರಿತು.


ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ, ಉದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್, ಕೃಷಿ ಕ್ಷೇತ್ರದಲ್ಲಿ ಮಂಗಳೂರಿನ ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ, ಅನಿವಾಸಿ ಉದ್ಯಮಿ ದುಬೈಯ ಪ್ರತಾಪ್ ಮೆಂಡೋನ್ಸಾ, ಮಹಿಳಾ ಸಾಧಕಿ ಶೋಭಾ ಮೆಂಡೊನ್ಸಾ ಅವರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, “ಸಾಧನೆ ಮಾಡಬೇಕೆಂದು ಅನೇಕರು ಪ್ರಯತ್ನಿಸುತ್ತಾರೆ. ಎಲ್ಲರಿಗೂ ಕೈಗೂಡುವುದಿಲ್ಲ. ಆದರೆ, ಅವರನ್ನು ಗುರುತಿಸಿ ಗೌರವಿಸುವುದು ಮುಖ್ಯವಾಗಿದೆ. ರಚನಾ ಸಂಸ್ಥೆ ಸೂಕ್ತ ಸಾಧಕರನ್ನೇ ಆಯ್ದುಕೊಂಡು ಗೌರವಿಸಿದೆ. ಸೂಕ್ತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಮತ್ತಷ್ಟು ಗೌರವ ಹೆಚ್ಚಾಗುವ ಜೊತೆಗೆ ಪುರಸ್ಕೃತರ ಜವಾಬ್ದಾರಿ ಹೆಚ್ಚಿದೆ. ದೇಶಕ್ಕೆ ಕೊಂಕಣಿ ಕೆಥೋಲಿಕರ ಕೊಡುಗೆ ಅವಿಸ್ಮರಣೀಯ. ರಾಜಕೀಯದಲ್ಲೂ ಕೊಂಕಣಿ ಕೆಥೋಲಿಕರು ಸಾಕಷ್ಟು ಸೇವೆ ನೀಡಿದ್ದಾರೆ. ಕ್ರೈಸ್ತರ ಉತ್ತಮ ಸೇವೆಯಿಂದಾಗಿ ಸಮುದಾಯವನ್ನು ಗುರುತಿಸುವ ಕೆಲಸವಾಗುತ್ತಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ, ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಅಧ್ಯಕ್ಷ ಜಾನ್ ಬಿ. ಮೊಂತೇರೊ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಉದ್ಯಮಿ ಜಾನ್ ಸುನಿಲ್, ಬೆಂಗಳೂರು ವಿ.ವಿ. ಮಾಜಿ ಕುಲಪತಿ, ಡೀನ್ ಮತ್ತು ನಿರ್ದೇಶಕಿ ಡಾ| ಸಿಂಥಿಯಾ ಮಿನೇಜಸ್, ರಚನಾ ಸಂಸ್ಥೆಯ ಕಾರ್ಯದರ್ಶಿ ವಿಜಯ್ ವಿ. ಲೋಬೋ, ಕೋಶಾಧಿಕಾರಿ ನೆಲ್ಸನ್ ಮೊಂತೇರೊ, ಉಪಾಧ್ಯಕ್ಷ ನವೀನ್ ಲೋಬೋ, ಸಂಘಟಕರಾದ ಯುಲಾಲಿಯಾ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು