ಇತ್ತೀಚಿನ ಸುದ್ದಿ
Chikkamagaluru | ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು; ಸಂಚಾರ ಅಸ್ತವ್ಯಸ್ತ
07/10/2025, 21:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnata@gmail.com
ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ.
ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಅಪಘಾತದಲ್ಲಿ ಲಾರಿ ಭಾಗಶಃ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾನೆ.
ಗಾಯಗೊಂಡ ಚಾಲಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರ ಸಹಕಾರದಿಂದ ವಾಹನ ತೆರವುಗೊಳಿಸಿ ಸಂಚಾರವನ್ನು ಸರಳಗೊಳಿಸಲಾಯಿತು.