6:35 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

Chikkamagaluru | ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಮತ್ತೆ ಕಾಡುಕೋಣ ದಾಳಿ; ಅನ್ನದಾತ ತೀವ್ರ ಗಾಯ

07/10/2025, 21:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡುಕೋಣ ದಾಳಿಗಳು ನಿಯಮಿತವಾಗುತ್ತಿದ್ದು, ಜನತೆ ಆತಂಕದಲ್ಲಿದ್ದಾರೆ. ವಾರದಲ್ಲಿ ಒಂದು-ಎರಡು ಕಡೆ ಕಾಡುಕೋಣ ದಾಳಿ ಪ್ರಕರಣಗಳು ವರದಿಯಾಗುತ್ತಿದ್ದು, ರೈತರ ಬದುಕು ಕಂಗಾಲಾಗುತ್ತಿದೆ.
ಇಂದು ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮಕ್ಕಿಮನೆ ಗ್ರಾಮದಲ್ಲಿ ರೈತ ರಾಜು (55) ಕಾಡುಕೋಣ ದಾಳಿಗೆ ಒಳಗಾಗಿದ್ದಾರೆ. ಮನೆ ಬಳಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ್ದು, ರಾಜುವಿನ ತೊಡೆ ಭಾಗ ಗಂಭೀರವಾಗಿ ಗಾಯಗೊಂಡಿದೆ.
ನಿರಂತರ ಕಾಡುಕೋಣ ದಾಳಿಗಳಿಂದಾಗಿ ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ರೈತರ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತವಾಗಿದೆ.
ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು