1:22 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

5.79 ಲಕ್ಷಕ್ಕೂ ಅಧಿಕ ಸೂರ್ಯಘರ್‌ ಫಲಾನುಭವಿಗಳಿಗೆ ಸಾಲ ಸೌಲಭ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

08/10/2025, 10:31

* ಬ್ಯಾಂಕ್‌ಗಳಿಂದ ₹10,907 ಕೋಟಿ ಸಾಲದ ಅರ್ಜಿಗಳಿಗೆ ಮಂಜೂರು

* ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

ನವದೆಹಲಿ(reporterkarnataka.com): ಪಿಎಂ ಸೂರ್ಯಘರ್ ಯೋಜನೆಯಡಿ ಸಾರ್ವಜನಿಕ ವಲಯದ ಬ್ಯಾಂಕ್‌(ಪಿಎಸ್‌ಬಿ)ಗಳು 5.79 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳ ಸಾಲದ ಅರ್ಜಿಗಳನ್ನು ಮಂಜೂರು ಮಾಡಿವೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
2025ರ ಸೆಪ್ಟೆಂಬರ್ ವೇಳೆಗೆ PSBಗಳು ಸೂರ್ಯಘರ್‌ ಯೋಜನೆ ಫಲಾನುಭವಿಗಳಿಗೆ ಒಟ್ಟಾರೆ ₹10,907 ಕೋಟಿ ಸಾಲ ಸೌಲಭ್ಯದ ಮೂಲಕ ಮೇಲ್ಛಾವಣಿ ಸೌರ ವ್ಯವಸ್ಥೆ ಸ್ಥಾಪನೆಗೆ ಆರ್ಥಿಕ ಬೆಂಬಲ ನೀಡಿವೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆ ಪ್ರತಿ ಮನೆಗಳನ್ನೂ ಶುದ್ಧ ಮತ್ತು ಕೈಗೆಟುಕುವ ಸೌರಶಕ್ತಿ ಮುಖೇನ ಸಬಲೀಕರಣಗೊಳಿಸುವಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುತ್ತಿದೆ ಎಂದಿದ್ದಾರೆ.

*ಜನಸಮರ್ಥ್ ಪೋರ್ಟಲ್ ಬೆಂಬಲ:* ಪಿಎಂ ಸೂರ್ಯಘರ್ ಯೋಜನೆಗೆ ಕಡಿಮೆ ಬಡ್ಡಿ ದರಗಳಲ್ಲಿ ಮೇಲಾಧಾರ-ಮುಕ್ತ ಕೈಗೆಟುಕುವ ಸಾಲ ಸೌಲಭ್ಯವನ್ನು PSBಗಳು ಸುಲಭಗೊಳಿಸಿವೆ. ಸರಳೀಕೃತ ಹಣಕಾಸು ಒದಗಿಸುವ ಮೂಲಕ ಸಕ್ರಿಯವಾಗಿ ಬೆಂಬಲ ನೀಡುತ್ತಿವೆ. ಸಾಲಗಳನ್ನು ಜನಸಮರ್ಥ್ ಪೋರ್ಟಲ್ ಮೂಲಕ ಸಂಸ್ಕರಿಸಲಾಗುತ್ತದೆ ಎಂದಿದ್ದಾರೆ.

*ಸ್ಪರ್ಧಾತ್ಮಕ ಬಡ್ಡಿದರದಲ್ಲಿ ಸಾಲ ಸೌಲಭ್ಯ:* ₹2 ಲಕ್ಷವರೆಗೆ ಮೇಲಾಧಾರವಿಲ್ಲದೆ ಸ್ಪರ್ಧಾತ್ಮಕ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುತ್ತಿದೆ. ಫಲಾನುಭವಿಗಳ ವಿದ್ಯುತ್ ವೆಚ್ಚ ಉಳಿತಾಯಕ್ಕೆ ಅನುಗುಣವಾಗಿ ಮರುಪಾವತಿಗೆ ದೀರ್ಘಾವಧಿ ಕಲ್ಪಿಸಿವೆ. ಅರ್ಜಿದಾರರಿಂದ ಸ್ವಯಂ ಘೋಷಣೆ ಆಧಾರದ ಮೇಲೆ ಡಿಜಿಟಲ್ ಮಂಜೂರಾತಿ ಪ್ರಕ್ರಿಯೆ ಸೇರಿದಂತೆ ಪ್ರಮುಖ ಪ್ರಯೋಜನಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪಿಎಂ ಸೂರ್ಯಘರ್ ಯೋಜನೆಗಾಗಿ ರಾಷ್ಟ್ರೀಯ ಪೋರ್ಟಲ್ (pmsuryaghar.gov.in) ನೊಂದಿಗೆ ಸಂಯೋಜಿಸಲಾಗಿದೆ. ಇದು ಫಲಾನುಭವಿಗಳಿಗೆ ಕೊನೆವರೆಗೂ ತಡೆರಹಿತ ಡಿಜಿಟಲ್ ಅಪ್ಲಿಕೇಶನ್ ಪ್ರಕ್ರಿಯೆ, ಬಳಕೆದಾರ ಅನುಭವ ಮತ್ತು ಡೇಟಾ-ಚಾಲಿತ ನಿರ್ಧಾರಕ್ಕೆ ಉಪಯುಕ್ತವಾಗಿದೆ ಎಂದಿದ್ದಾರೆ.
ಹಣಕಾಸು ಸೇವೆಗಳ ಇಲಾಖೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಸಹಯೋಗದೊಂದಿಗೆ ಸೂರ್ಯಘರ್‌ ಯೋಜನೆ ಸಾಲಗಳ ಪ್ರಗತಿಯನ್ನು ಸಕ್ರಿಯವಾಗಿ ಪರಿಶೀಲಿಸುತ್ತದೆ. ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಗಳು ಮತ್ತು ಪ್ರಮುಖ ಜಿಲ್ಲಾ ವ್ಯವಸ್ಥಾಪಕರ ಸಹಯೋಗದೊಂದಿಗೆ ಯೋಜನೆ ಅನುಷ್ಠಾನವನ್ನು ಬಲಪಡಿಸುತ್ತದೆ. ಇದು ಯೋಜನೆ ವೇಗವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು