3:55 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕಿನ್ಯಾ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಾಟೆಕಲ್ ಶಾಖೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

08/10/2025, 14:11

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ಆವರಣದಲ್ಲಿ ಜರುಗಿತು.
ಕಿನ್ಯಾ ಬೆಳರಿಂಗೆ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆಯ ಅರ್ಚಕರಾದ ರವಿ ಪೂಜಾರಿ ಹಾಗೂ ಅರ್ಚಕ ಪಾತ್ರಿಯಾದ ಕಿಶೋರ್ ಪೂಜಾರಿ ಅವರು ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ದಂತ ವೈದ್ಯರಾದ ಡಾ. ಇಮ್ರಾನ್ ಪಾಷಾರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಸಂಘದ ಸಹಯೋಗದೊಂದಿಗೆ ಯೆನಪೋಯ ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡುತ್ತಾ ಬರುತ್ತಿದೆ. ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹಲ್ಲನ್ನು ಕೀಳುವುದು, ಹಲ್ಲನ್ನು ಸ್ವಚ್ಚಗೊಳಿಸುವುದು, ಹಾಗೂ ಹುಳುಕು ಹಲ್ಲುಗಳ ಭರ್ತಿ ಮಾಡಲಾಗುವುದಲ್ಲದೇ, ಈ ಶಿಬಿರದಲ್ಲಿ ಅನೇಕ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಜೆ.ಸಿ ನಾಯಕ್ ರವರು ಮಾತನಾಡಿ “ಯಾವುದೇ ಮುಜುಗರ ತೋರಿಸದೆ ನಿಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿ ಆರೋಗ್ಯದಿಂದಿರಿ. ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ, ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ” ಎಂದು ಶುಭ ಹಾರೈಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಇದರ ಸ್ಥಾಪಕಾಧ್ಯಕ್ಷರಾದ ಜಯಂತ ಎಮ್ ಪೂಜಾರಿ ಯವರು ಮಾತನಾಡಿ “ಕೆಲಸದ ಒತ್ತಡ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳಿಂದ ನಮ್ಮ ಆರೋಗ್ಯದತ್ತ ಗಮನ ಹರಿಸಲು ಸಾಧ್ಯವಾಗದ ಕಾರಣ ಜೀವನದ ಆರೋಗ್ಯದ ಮೇಲೆ ವ್ಯತಿರುಕ್ತ ಪರಿಣಾಮ ಬೀರುತ್ತದೆ. ಇಂತಹ ಶಿಬಿರಗಳಲ್ಲಿ ತಮ್ಮ ಆರೋಗ್ಯ ತಪಾಸಣೆ ಮಾಡಿದರೆ ಉತ್ತಮ ಜೀವನ ಶೈಲಿ ನಡೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ನಮ್ಮ ಊರಿನ ಜನಸಾಮಾನ್ಯರಿಗೆ ಇಂತಹ ಶಿಬಿರಗಳನ್ನು ಆಯೋಜನೆ ಮಾಡಿರುವುದಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ‘ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಹಬ್ಬಗಳ ಪ್ರಯುಕ್ತ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಅತ್ಯಧಿಕ ಮೌಲ್ಯವನ್ನು ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುತ್ತಿದೆ. ನಮ್ಮ ಎಲ್ಲಾ ಶಾಖೆಗಳಲ್ಲಿ ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಬ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಬೇಕೆಂದು ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಇದರ ಅಧ್ಯಕ್ಷರಾದ ಶಿವಪ್ಪ ಪೂಜಾರಿ, ಮಹಾಮ್ಮಯಿ ಮಿತೃ ಮಂಡಳಿ ಬೆಳರಿಂಗೆ ಕಿನ್ಯಾ ಇದರ ಅಧ್ಯಕ್ಷರಾದ ಜಗದೀಶ್ ಪೂಜಾರಿ ಬೆಳರಿಂಗೆ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ಇದರ ಸಾರ್ವಜನಿಕ ಸಂಪರ್ಕ ಅಧಿಕಾರಿ ಲ ಭರತ್ ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಕನ್ನಡಕ ವಿತರಣೆ, ದಂತ ತಪಾಸಣೆ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಅಕ್ಷತಾ. ಕೆ ಸ್ವಾಗತಿಸಿ, ಸಿಬ್ಬಂದಿಯಾದ ಪವಿತ್ರಾ ಧನ್ಯವಾದವಿತ್ತರು. ಸಹಾಯಕ ಪ್ರಬಂದಕರಾದ ವಿಶ್ವನಾಥ ರವರು ಕಾರ್ಯಕ್ರಮದ ನಿರೂಪಣೆ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು