9:16 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು; ಇನ್ನೊಬ್ಬರು ಗಂಭೀರ

08/10/2025, 19:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಯಂತ್ರಣ ತಪ್ಪಿ ಕ್ರೇನ್ ಟಯರ್ ಬೈಕ್ ಮೇಲೆ ಹತ್ತಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ಪಟ್ಟಣದ ಸಂತೆ‌ ಮೈದಾನದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಅಂಗನವಾಡಿ ಸಿಬ್ಬಂದಿ ಸುಪ್ರಿತಾ (26) ಎಂದು ಗುರುತಿಸಲಾಗಿದೆ. ಕ್ರೇನ್ ಬೈಕಿಗೆ ಡಿಕ್ಕಿ ಹೊಡೆದು
ಬೈಕ್ ಹಾಗೂ ಮಹಿಳೆಯ ಮೇಲೆ ಹತ್ತಿದೆ. ಇದರಿಂದ
ಸುಪ್ರಿತಾ ಅವರು ಸ್ಥಳದಲ್ಲೇ ಸಾವು, ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.
ಜಲಜೀವನ್ ಮಿಷನ್ ಕಾಮಗಾರಿಗೆ ಕ್ರೇನ್ ಬಂದಿತ್ತು.
ಮೂಡಿಗೆರೆ ಪಟ್ಟಣದಿಂದ ಹೆಸ್ಗಲ್ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗಾಗಿ ಕ್ರೇನ್ ತರಿಸಲಾಗಿತ್ತು.
ಕ್ರೇನ್ ಬ್ರೇಕ್ ಫೇಲ್ ಆಗಿತ್ತೇ ಅಥವಾ ಚಾಲಕನ ಅಜಾಗರೂಕತೆಯೇ ಎನ್ನುವ ಬಗ್ಗೆ ಪೊಲೀಸರ ತನಿಖೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು