9:15 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ; ಇಬ್ಬರ ಬಂಧನ

09/10/2025, 13:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮೂಡಿಗೆರೆ ಪ್ರಾದೇಶಿಕ ವಲಯದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಅಕ್ರಮ ಶ್ರೀಗಂಧ ಕಳ್ಳಸಾಗಣೆ ಪತ್ತೆಯಾಗಿದೆ. ಅಕ್ಟೋಬರ್ 8ರಂದು ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಮೂಡಿಗೆರೆ ಶಾಖೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಸುಜುಕಿ ಕಂಪನಿಯ ಬೈಕ್ (KA-18-ED-5486) ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀಗಂಧ ಸಾಗಣೆ ಮಾಡುತ್ತಿದ್ದ ಯೂಸುಫ್ ಹಾಗೂ ಸ್ಥಳೀಯ ಪತ್ರಕರ್ತ ಮನ್ಸೂರ್ ಎಂಬುವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಶೇಷವೆಂದರೆ, ಆ ಬೈಕ್ ಮೇಲೆ “PRESS” ಎಂದು ಬರೆದು ಕಳ್ಳಸಾಗಣೆ ನಡೆಸಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಸಹಾಯಕ ಸಂರಕ್ಷಣಾಧಿಕಾರಿ ಆಕರ್ಷ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದ್ದು, ವಲಯ ಅರಣ್ಯಾಧಿಕಾರಿ ಮಂಜುನಾಥ, ಉಪ ವಲಯ ಅರಣ್ಯಾಧಿಕಾರಿಗಳಾದ ಸುಹಾಸ್, ಅಶ್ವಥ್, ಹಾಗೂ ಅರಣ್ಯ ರಕ್ಷಕರಾದ ಉಮೇಶ್, ಸುರೇಶ್, ಮನು, ಸುಮ್ಮಂತ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು