11:51 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹೈಕೋರ್ಟ್ ಆದೇಶ ಉಲ್ಲಂಘನೆ: ವಿಎಚ್ ಪಿ ಮುಖಂಡ ಶರಣ್ ಪಂಪ್‌ವೆಲ್‌ಗೆ 2 ಲಕ್ಷ ರೂ. ದಂಡ

09/10/2025, 18:56

ಬೆಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ.
ರಾಜ್ಯ ಲೀಗಲ್‌ ಸರ್ವಿಸ್ ಅಥಾರಿಟಿಗೆ ಒಂದು ಲಕ್ಷ ರೂಪಾಯಿ, ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ಒಂದು ಲಕ್ಷ ರೂಪಾಯಿ ನೀಡಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾ ಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವೇಶ ಮಾಡದಂತೆ ಶರಣ್ ಪಂಪ್‌ವೆಲ್‌ಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದನ್ನು ಪ್ರಶ್ನೆ ಮಾಡಿ ಶರಣ್ ಹೈಕೋರ್ಟ್ ಮೊರೆ ಹೋಗಿದ್ದರು. ನಂತರ ಕೆಲವು ಷರತ್ತು ವಿಧಿಸಿ ಹೈಕೋರ್ಟ್ ಜಿಲ್ಲಾಡಳಿತದ ನಿರ್ಬಂಧ ತೆರವು ಮಾಡಿತ್ತು.
ಶೋಭಾ ಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡಿತ್ತು. ಭಾಷಣ ಮಾಡದಂತೆ ಹೇಳಿತ್ತು. ಆದರೆ ಶೋಭಾ ಯಾತ್ರೆಯಲ್ಲಿ ಶರಣ್ ಭಾಷಣ ಮಾಡಿದ್ದರು. ಆದೇಶ ಉಲ್ಲಂಘನೆಯ ಕುರಿತು ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದು, ಇದನ್ನು ಪರಿಗಣಿಸಿದ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು